
ಭಟ್ಕಳ: ತಾಲ್ಲೂಕಿನ ಬೆಳ್ನಿಯ ಬಂದರ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದ ಘಟನೆ ರವಿವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಮಂಜುನಾಥ ಸುಕ್ರ ಗೊಂಡ (೩೧) ತನ್ನ ತಾಯಿ ದುರ್ಗಿ ಎಸ್. ಗೊಂಡ (೫೦) ಮತ್ತು ತನ್ನ ಸಹೋದರನ ಆರು ವರ್ಷದ ಮಗ ಅಕಿಲ್ ಗೊಂಡ ಅವರೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಸಂಶುದ್ದೀನ್ ವೃತ್ತದಿಂದ ತಲಗೋಡ್ ಕಡೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಅಡ್ಡ ಬಂದಿದ್ದ ನಾಯಿಯನ್ನು ತಪ್ಪಿಸಲು ಹೋಗಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬಿದ್ದು ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆ ಪೋಲಿಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ..

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ