
ಭಟ್ಕಳ: ಕೇಂದ್ರದಲ್ಲಿ ಇದೇ ರೀತಿ ಬಿಜೆಪಿ ಸರಕಾರದ ಅವಧಿ ಮು0ದುವರೆದರೆ ದೇಶ’ ದಲ್ಲಿ ಅನಾಹುತಕ್ಕೆ ನಾವುಗಳೇ ದಾರಿ ಮಾಡಿಕೊಟ್ಟಂತೆ ಆಗಲಿದೆ. ಮತ್ತೆ ಅವರು ಗೆದ್ದರೆ ಸ0ವಿಧಾನವನ್ನು ಬದಲಿಸಲಿದ್ದಾರೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಜಬ್ಬಾರ್ ಖಾನ್ ಹೇಳಿದರು.
ಭಟ್ಕಳ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಸಭೆ ನಡೆಸಿದ ಅವರು, ಕಳೆದ 70 ವರ್ಷದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಇತಿಹಾಸ ಇದೆ. ಕಾಂಗ್ರೆಸ್ ಸರಕಾರ ಮಾಡಿದ ಅಭಿವೃದ್ಧಿಯ ಕೆಲಸವನ್ನು ಮುನ್ನಡೆಸಿಕೊಂಡು ಹೋಗಿದ್ದಾರೆ ಹೊರತು, ಅವರ ಸರಕಾರದ ಕೊಡುಗೆ ಶೂನ್ಯ. ಅವರ 7 ವರ್ಷದ ಸಾಧನೆ ಏನು ಎನ್ನುವುದೇ ಪ್ರಶ್ನಾತೀತದ0ತಾಗಿದೆ. ಸಾಕಷ್ಟು ವಿಮಾನ ನಿಲ್ದಾಣವನ್ನು ಈಗಾಗಲೇ ಖಾಸಗಿವರಿಗೆ ನೀಡಿರುವುದೇ ಬಿ ಜಿ ಪಿ ಸರ್ಕಾರ ಅಭಿವೃದ್ಧಿಯಾಗಿದೆ ಎಂದರು.
ಸರ್ಕಾರ ಧರ್ಮ ಜಾತಿಗಳ ನಡುವೆ ಒಡಕು ತಂದು ದೇಶದಲ್ಲಿ ಪರಿಸ್ಥಿತಿ ಹಾಳು ಮಾಡುವಂಥವರನ್ನು ಬಂಧಿಸಲು ಮೀನಾಮೇಷ ಎಣಿಸುತ್ತಿದೆ. ಎಲ್ಲರೂ ಸೌಹಾರ್ದದಯುತವಾಗಿ ಬದುಕಬೇಕಾದ ದೇಶದಲ್ಲಿ ಬಿಜೆಪಿ ಸರಕಾರ ಇದನ್ನು ಹಾಳು ಗೆಡವುತ್ತಿದೆ. ಕೋವಿಡ್ ಸಮಯದಲ್ಲಿ ರಾಜ್ಯ, ಕೇಂದ್ರ ಸರಕಾರ ನಿರ್ವಹಣೆಯಲ್ಲಿ ಸಂಪೂರ್ಣ ಎಡವಿದೆ. ಈ ಸಾಂಕ್ರಾಮಿಕದ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನ ಭಾಗ್ಯ ಯೋಜನೆ ಇಲ್ಲವಾಗಿದ್ದರೆ ಜನರು ಯಾವ ಪರಿಸ್ಥಿತಿ ಎದುರಿಸುತ್ತಿದ್ದರು ಎ0ಬುದು ಊಹಿಸಲು ಸಾಧ್ಯವಿಲ್ಲ ಎಂದರು.
ಈ ಸ0ದರ್ಬದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಪ್ರಧಾನ ಕಾರ್ಯದರ್ಶಿ ಸುರೇಶ ನಾಯ್ಕ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿಠಲ ನಾಯ್ಕ, ಅಲ್ಪಸ0ಖ್ಯಾತ ವಿಭಾಗದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್, ತಾಲೂಕಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಸದಸ್ಯರು, ಎಲ್ಲಾ ವಿಭಾಗಗಳ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಪ0ಚಾಯತ್ ಮಾಜಿ ಸದಸ್ಯರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಜಾಲಿ ಪಟ್ಟಣ ಪಂಚಾಯತ್ ಸದಸ್ಯರು ಮತ್ತು ತಾಲೂಕಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ