March 12, 2025

Bhavana Tv

Its Your Channel

ವಿವಿಧ ಬೇಡಿಕೆ ಈಡೇರಿಸುವಂತೆ ಭಟ್ಕಳ ಅಂಗನವಾಡಿ ನೌಕರರ ಸಂಘದಿಂದ ಮನವಿ

ಭಟ್ಕಳ: ವಿವಿಧ ಬೇಡಿಕೆ ಈಡೇರಿಕೆಗಾಗಿ ಭಟ್ಕಳ ಅಂಗನವಾಡಿ ನೌಕರರ ಸಂಘದಿಂದ ಸಹಾಯಕ ಆಯುಕ್ತರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಅಂಗನವಾಡಿ ನೌಕರರನ್ನು ಖಾಯಂ ಮಾಡಬೇಕು, ಸೇವಾ ಜೇಷ್ಠತೆಯ ಆಧಾರದಲ್ಲಿ ಕನಿಷ್ಠ ಕೂಲಿ ನೀಡಬೇಕು.ಶಾಲಾ ಪೂರ್ವ ಶಿಕ್ಷಣ ಅಂಗನವಾಡಿ ಯಲ್ಲಿ ನಡೆಸಬೇಕು, ನೂತನ ಶಿಕ್ಷಣ ನೀತಿಯನ್ನು ಕೈ ಬಿಡಬೇಕು. ಎ೦ದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ. ಸಹಾಯಕ ಆಯುಕ್ತ ಮಮತಾದೇವಿ ಮನವಿ ಪತ್ರವನ್ನು ಸ್ವೀಕರಿಸಿದರು. ಭಟ್ಕಳ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಪುಷ್ಪಾವತಿ ನಾಯ್ಕ, ಪದ್ಮಾ ನಾಯ್ಕ ಹೊಸನೆ ಮೊದಲಾದವರು ಉಪಸ್ಥಿತರಿದ್ದರು.

error: