March 13, 2025

Bhavana Tv

Its Your Channel

ಬೂಸ್ಟರ್ ಲಸಿಕಾ ಮೇಳಕ್ಕೆ ಶಾಸಕ ಸುನೀಲ ನಾಯ್ಕ ಚಾಲನೆ

ಭಟ್ಕಳ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಬೂಸ್ಟರ್ ಲಸಿಕಾ ಮೇಳಕ್ಕೆ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿನ ಮಾತನಾಡಿದ ಅವರು. ಬೆಂಗಳೂರಿನಲ್ಲಿ ನಿತ್ಯ ಸಾವಿರಾರು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಮೊದಲ 2 ಕೊರೂನಾ ಲಸಿಕೆ ಪಡೆದವರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಬಂದಿಲ್ಲ. 3ನೇ ಅಲೆಯ ತೀವ್ರತೆ ಕಡಿಮೆಯಿದ್ದು, ಬೂಸ್ಟರ್ ಲಸಿಕೆ ಪಡೆಯುವುದರಿಂದ ಕೋವಿಡ್ ಪರಿಣಾಮವನ್ನು ಇನ್ನಷ್ಟು ತಗ್ಗಿಸಲು ಸಾಧ್ಯವಿದೆ. 60 ವರ್ಷ ಮೇಲ್ಪಟ್ಟ ಹಿರಿಯರು ಈ ಲಸಿಕೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಭಟ್ಕಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಮಾತನಾಡಿ, ಕಳೆದ 2 ವರ್ಷಗಳಿಗೆ ಹೋಲಿಸಿದರೆ ಕೊರೊನಾ 3ನೇ ಅಲೆ ಅಷ್ಟೊಂದು
ಪರಿಣಾಮಕಾರಿಯಾಗಿಲ್ಲ.
ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆ ಇದ್ದು, ವೆಂಟಿಲೇಟರ್, ಆಮ್ಲಜನಕ ಕೊರತೆಯಂತಹ ಸಮಸ್ಯೆ ಎದುರಾಗಿಲ್ಲ ಎಂದು ತಿಳಿಸಿದರು. ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಸುರೇಶ ನಾಯಕ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶಿಯವಾಗಿ ಲಸಿಕೆ ಉತ್ಪಾದನೆಗೆ ಅವಕಾಶ ನೀಡಿ ಜಗತ್ತಿಗೆ ಮಾದರಿಯಾಗಿದೆ ಎಂದು ವಿವರಿಸಿದರು.

error: