
ಭಟ್ಕಳ: ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ ಗೋಳಿಬೀಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವವು ಪತ್ತೆಯಾಗಿದೆ.
ಮೃತರನ್ನು ಭಟ್ಕಳ ತಾಲೂಕಿನ ಯಲ್ವಡಿಕವೂರು ಗ್ರಾ.ಪಂ. ಬಿಟ್ಟಿಬೀಳೂರು ನಿವಾಸಿ ಸೋಮಯ್ಯ ನಾರಾಯಣ ನಾಯ್ಕ (೬೩) ಕೊಲ್ಲೂರಿಮನೆ ಎಂದು ಗುರುತಿಸಲಾಗಿದ್ದು, ಮೃತರು ಧರಿಸಿದ್ದ ಲುಂಗಿಯನ್ನೇ ನೇಣನ್ನಾಗಿ ಮಾಡಿಕೊಂಡಿರುವುದು ಕಂಡು ಬಂದಿದೆ. ಹೊಳೆಗೆ ಸ್ನಾನ ಮಾಡಲು ಹೋದ ಸೋಮಯ್ಯ ವಾಪಸ್ಸು ಬಾರದೇ ಇದ್ದಾಗ ಹುಡುಕಲು ಹೋದ ಅವರ ಕುಟುಂಬ ಸದಸ್ಯರೋರ್ವರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವವನ್ನು ಕಂಡು ಉಳಿದವರಿಗೆ ಮಾಹಿತಿ ನೀಡಿದ್ದಾರೆ. ಮೃತರು ಹೆಂಡತಿ ಹಾಗೂ ನಾಲ್ಕು ಗಂಡು ಮಕ್ಕಳನ್ನು ಅಗಲಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಐ ಭರತ್ ತನಿಖೆ ಕೈಗೊಂಡಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ