
ಭಟ್ಕಳ: ಮಾನಸಿಕ ಒತ್ತಡಕ್ಕೆ ಸಿಲುಕಿದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ ಚಿತ್ರಾಪುರ ಬಪ್ಪನಕೊಡ್ಲು ಭಾಗದಲ್ಲಿ ನಡೆದಿದೆ.
ಮೃತ ಯುವಕನನ್ನು ಶ್ಯಾಮಲ್ಕಿಶೋರ ಸುರೇಂದ್ರ ಆಚಾರ್ಯ (39) ಎಂದು ಗುರುತಿಸಲಾಗಿದೆ. ಈತ ತನ್ನ ಮನೆಯಲ್ಲಿಯೇ ನೈಲಾನ್ ಹಗ್ಗವನ್ನೇ ನೇಣನ್ನಾಗಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬAದಿದೆ. ಈ ಕುರಿತು ಮೃತರ ತಾಯಿ ಲತಾ ಆಚಾರ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ