
ಭಟ್ಕಳ: ಹಿಜಾಬ್ ವಿಷಯದಲ್ಲಿ ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳು ನ್ಯಾಯಾಲಯದ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಅನುಷ್ಠಾನಕ್ಕೆ ಹೊರಟಿದ್ದು, ಈ ಕೂಡಲೇ ನ್ಯಾಯಾಲಯದ ಆದೇಶ ಪಾಲನೆಗಾಗಿ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಸುನ್ನಿ ಸ್ಪೂಡೆಂಟ್ ಫೆಡರೇಶನ್ (ಎಸ್‌ಎಸ್‌ಎಫ್) ಸಂಘಟನೆಯ ಸದಸ್ಯರು ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಹಿಜಾಬ್ ವಿಷಯದಲ್ಲಿ ರಾಜ್ಯ ಹೈಕೋರ್ಟಿ ನೀಡಿರುವ ಮಧ್ಯಂತರ ಆದೇಶವು, ವಿದ್ಯಾರ್ಥಿಗಳ ಸಮವಸ್ತ್ರವನ್ನು ಕಾಲೇಜು ಅಭಿವೃದ್ಧಿ ಸಮಿತಿ ಗೊತ್ತುಪಡಿಸಿದ್ದಲ್ಲಿ ಮಾತ್ರ ಅನ್ವಯವಾಗುತ್ತಿದ್ದು, ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳಿಗೆ ಸಂಬAಧಿಸಿದ್ದಲ್ಲ. ಅಲ್ಲದೇ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಅವರು, ಪದವಿ ತರಗತಿಯ ವಿದ್ಯಾರ್ಥಿನಿಯರಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಶಿಕ್ಷಣ ಇಲಾಖೆಯು ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಅನುಷ್ಠಾನ ಮಾಡುತ್ತಿದೆ. ಪೊಲೀಸ್ ಅಧಿಕಾರಿಗಳೂ ತಮ್ಮ ಸಮವಸ್ತ್ರದಲ್ಲಿಯೇ ಶಾಲೆಗಳಿಗೆ ಭೇಟಿ ನೀಡಿ, ಸಂವಿಧಾನದ ಆಶಯ, ಹಕ್ಕುಗಳಿಗೆ ವಿರುದ್ಧವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ತಮ್ಮ ಹಿಜಾಬ್ ಕಳಚುವಂತೆ ನಿರ್ದೇಶನ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿ ಇರುವಾಗಲೇ ಇಂತಹ ಕ್ರಮ ನಡೆದಿರುವುದು ಸದರಿ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿರುತ್ತದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ತಹಸೀಲ್ದಾರ ಎಸ್.ರವಿಚಂದ್ರ ಮನವಿಯನ್ನು ಸ್ವೀಕರಿಸಿದರು. ಮುನೀರ್, ಆರೀಫ್ ಸಯಿದಿ, ಅಬ್ದುಲ್ ಅಲೀಮ್, ದೊಡ್ಡ ಆದಿಸ್ ಉಪಸ್ತಿತರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ