
ಭಟ್ಕಳ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿಶೇಷ ಶಿಬಿರವನ್ನು ಇಲ್ಲಿನ ಆಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ದೇವಸ್ಥಾನದ ಧರ್ಮದರ್ಶಿ ನಾರಾಯಣ ದೈಮನೆ ದೀಪ ಬೆಳಗುವುದರೊಂದಿಗೆ ಉದ್ಘಾಟಿಸಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಭಾಗೀರಥಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪಕ ರಾಜು ಮೊಗೇರ, ಅರ್ಥ ಶಾಸ್ತç ಉಪನ್ಯಾಸಕಿ ನೇತ್ರಾವತಿ ನಾಯ್ಕ, ಕಾಲೇಜಿನ ಹಳೆ ವಿದ್ಯಾರ್ಥಿ ಜಯರಾಮ ನಾಯ್ಕ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ವೈಶಾಲಿ ಜಿ.ಆರ್. ಸಂಘಟಿಸಿದ್ದರು.
ಉಪನ್ಯಾಸಕಿ ವೈಶಾಲಿ ಜಿ.ಆರ್. ಸ್ವಾಗತಿಸಿದರು. ಉಪನ್ಯಾಸಕಿ ಶೈಲಜಾ ಎಸ್. ಎಚ್. ನಿರೂಪಿಸಿದರು. ನೇತ್ರಾವತಿ ನಾಯ್ಕ ವಂದಿಸಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ