
ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿರುದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಭಟ್ಕಳ ತಾಲೂಕು ಇವರ ವತಿಯಿಂದ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಶಾಲೆಗೆ ಡೆಸ್ಕ್, ಬೆಂಚ್ ವಿತರಣೆ ಹಾಗೂ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾದ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಣಭಾವಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ನ ವಿವಿಧ ಯೋಜನೆಗಳಿಂದ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅಪಾರವಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಜೂಜೆ ಡಿಕೋಸ್ತಾ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಶಂಕರ ಶೆಟ್ಟಿ ಮಾತನಾಡಿ ಯೋಜನೆಯ ಕಾರ್ಯಕ್ರಮದ ಕುರಿತು ವಿವರಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಜಗದೀಶ ಜೈನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಮೀಳಾ ಡಿಕೊಸ್ತಾ, ಸದಸ್ಯರಾದ ದಾಸ ಮೊಗೇರ, ಮೋಹನ ಮೊಗೇರ, ಗೌರಿ, ಸಿ.ಆರ್.ಪಿ. ಶಂಕರ, ಒಕ್ಕೂಟದ ಅಧ್ಯಕ್ಷೆ ಗೀತಾ ನಾಯ್ಕ, ಪ್ರಭಾರ ಮುಕ್ಯೋಪಾಧ್ಯಾಯಿನಿ ಮಮತ, ಸಹ ಶಿಕ್ಷಕರು, ಸ್ಥಳೀಯರು, ವಿದ್ಯಾರ್ಥಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು,
ಭಟ್ಕಳ ತಾಲೂಕು ಯೋಜನಾಧಿಕಾರಿ ಚಂದ್ರಹಾಸ್ ಬಿ. ಸ್ವಾಗತಿಸಿದರು, ಮೇಲ್ವಿಚಾರಕಿ ರೇಷ್ಮಾ ನಿರೂಪಿಸಿದರು, ಮಮತಾ ವಂದಿಸಿದರು

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ