
ಭಟ್ಕಳ: ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯ ಧ್ಯಾನ ಕುಟೀರದಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಉಜಿರೆಯ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ರಾಮತಾರಕ ಮಹಾಯಜ್ಞದ ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸತ್ಸಂಗದಿAದ ನಮ್ಮ ಮನಸ್ಸು ಮೇಲುಸ್ತರಕ್ಕೆ ಹೋಗಿ ಅದು ಭಗವಂತನ ಸಾನಿಧ್ಯವಾಗಿರುತ್ತದೆ. ಸತ್ಸಂಗದಿAದ ಭಗವಂತನ ಕೃಪೆಗೆ ಪಾತ್ರರಾಗುತ್ತೇವೆ. ಜೀವನ ಪೂರ್ತಿ ಶ್ರದ್ಧೆಯಿಂದ ಇರುವಂತೆ ವೇದ ತಿಳಿಸುತ್ತದೆ. ಜೀವನದಲ್ಲಿ ಪ್ರತಿಯೊಬ್ಬರೂ ಉತ್ತಮ ಮಾರ್ಗದಲ್ಲಿ ನಡೆಯಬೇಕು ಎಂದರು.
ವರ್ಧಂತ್ಯುತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ವೇದಮೂರ್ತಿ , ಲಕ್ಷ್ಮಿಪತಿ ಗೋಪಾಲಾಚರ್ಯ ಬೆಂಗಳೂರು ಇವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಹಾಯಜ್ಞ ನಡೆಯಿತು. ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮಂಕಾಳ ವೈದ್ಯ, ಶ್ರೀರಾಮ ಕ್ಷೇತ್ರದ ಟ್ರಸ್ಟಿ ಚಿತ್ತರಂಜನ್, ಆಸರಕೇರಿ ಗುರುಮಠ ತಿರುಮಲ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ, ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಕಾರ್ಯದರ್ಶಿ ಎಂ.ಜೆ.ನಾಯ್ಕ, ಶಿರಾಲಿ ಹಳೇಕೋಟೆ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸುಭ್ರಾಯ ನಾಯ್ಕ, ವಾಮನ ನಾಯ್ಕ ಮಂಕಿ, ಎಂ.ಜಿ. ನಾಯ್ಕ ಹೊನ್ನಾವರ, ಆರ್.ಜಿ. ನಾಯ್ಕ, ಕುಮಟಾ, ಗಂಗಾಧರ, ಎಲ್.ಎಸ್.ನಾಯ್ಕ, ಖಾದಿ ಗ್ರಾಮೋದ್ಯೋಗ ಮಂಡಳಿಯ ಸದಸ್ಯ ಮುಕುಂದ ನಾಯ್ಕ, ತಾ.ಪಂ. ಮಾಜಿ ಅದ್ಯಕ್ಷ ಈಶ್ವರ ನಾಯ್ಕ ಸೇರಿದಂತೆ ಹಲವು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಭಟ್ಕಳದ ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ ವಂದಿಸಿದರು. ಶಿಕ್ಷಕ ನಾರಾಯಣ ನಾಯ್ಕ ನಿರೂಪಿಸಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ