
ಭಟ್ಕಳ: ತಾಲೂಕಿನ ಆಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್. ವಾರ್ಷಿಕ ಶಿಭಿರದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಫವಾಜ್ ಪಿ.ಎ. ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಗಳನ್ನು ವಿವರಿಸಿದರು.
ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಡಿಯಲ್ಲಿ ದೊರೆಯುವ ಸೌಲಭ್ಯಗಳನ್ನ ಹಾಗೂ ಮಹಿಳಾ ಮತ್ತು ಮಕ್ಕಳ ರಕ್ಷಣೆಗಾಗಿಯೇ ಇರುವ ಕಾನೂನುಗಳ ಕುರಿತು ತಿಳಿವಳಿಕೆಯನ್ನು ನೀಡಿದರು. ವಿದ್ಯಾರ್ಥಿಗಳು ಕಾನೂನು ಸೇವಾ ಪ್ರಾಧಿಕಾರದ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಎನ್. ಎಸ್. ಎಸ್. ಅಧಿಕಾರಿ ವೈಶಾಲಿ ಜೆ.ಆರ್., ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಜಯರಾಮ ನಾಯ್ಕ ಉಪಸ್ಥಿತರಿದ್ದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ