
ಭಟ್ಕಳ: ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ದಂದು ಹತ್ತನೇಯ ತರಗತಿಯ ಸ್ಟೇಟ್ ಐಸಿಎಸ್‌ಇ ವಿಭಾಗ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಬೀಳ್ಕೊಡುಗೆಯ. ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.



ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ನಾಗೇಶ್ ಭಟ್ ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹೋದಾಗ ಹೇಗೆಲ್ಲ ತಯಾರಿ ನಡೆಸಬೇಕು ಗುರಿ ಸಾಧಿಸುವ ಛಲ ಹೇಗಿರಬೇಕು ಎನ್ನುವುದನ್ನು ‘ಇನ್‌ಫೋಸಿಸ್’ ಸ್ಥಾಪಕರಾದ ನಾರಾಯಣ್ ಮೂರ್ತಿಯವರ ಉದಾಹರಣೆಯೊಂದಿಗೆ ಮಕ್ಕಳಿಗೆ ಮನವರಿಕೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ‘ಬೀನಾ ವೈದ್ಯ’ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಂಕಾಳ್ ಎಸ್. ವೈದ್ಯರವರು ವಹಿಸಿ ಮಾತನಾಡುತ್ತಾ ಮಕ್ಕಳ ಮುಂದಿನ ಭವಿಷ್ಯದ ಕುರಿತು ಹಾರೈಸುತ್ತಾ ತಂದೆ-ತಾಯಿಗಳು ಕಷ್ಟಪಟ್ಟು ಶಿಕ್ಷಣ ನೀಡುವ ಉದ್ದೇಶವೆನೆಂದರೇ ಮುಂದಿನ ದಿನಗಳಲ್ಲಿ ಉತ್ತಮ ಪ್ರಜೆಯಾಗಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬೇಕೆಂಬ ಆಕಾಂಕ್ಷೆಯಿAದ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ತಾವೇ ರೂಪಿಸಿಕೊಳ್ಳಬೇಕೆಂಬ ಹಿತನುಡಿಗಳನ್ನು ಆಡಿದರು. ನಿಮ್ಮ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ನಾನು ಮಾಡಿಕೊಟ್ಟಿದ್ದೇನೆ, ಮುಂದೆಯೂ ಮಾಡಿಕೊಡುತ್ತೇನೆ ಎಂಬ ಭರವಸೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ‘ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕಿಯಾದ ಪುಷ್ಪಲತಾ ವೈದ್ಯರವರು ಮಾತನಾಡುತ್ತಾ ವಿದ್ಯಾರ್ಥಿಗಳು ಕನಸು ಕಾಣುವುದು ಮುಖ್ಯವಲ್ಲ, ಕನಸನ್ನು ಸಫಲವಾಗಿಸುವುದು ಮುಖ್ಯ ಎನ್ನುವುದನ್ನು ನೀತಿ ಕಥೆಯ ಮೂಲಕ ಮಕ್ಕಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಕೋರಿದರು.
ಈ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಈ ಸಂಸ್ಥೆಯಲ್ಲಿಯೇ ಶಿಕ್ಷಕಿಯರಾಗಿ ಸೇವೆ ಸಲ್ಲಿಸುತ್ತಿರುವ ಉಮೈಮ ಮನ್ನಾ ಹಾಗೂ ಐಶಾ ಇಜ್ಜಾ ರವರು ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ವಿಠ್ಠಲ್ ನಾಯ್ಕ ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು. ವಿದ್ಯಾರ್ಥಿಗಳಿಗಾಗಿ ಕೆಲವು ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಾಂಶುಪಾಲರಾದ ವಿಠ್ಠಲ್ ನಾಯ್ಕ ರವರು ಎಲ್ಲರನ್ನು ಸ್ವಾಗತಿಸಿದರು. ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ