May 2, 2024

Bhavana Tv

Its Your Channel

ಪಂಚರಾಜ್ಯಗಳ ಚುನಾವಣಾ ಫಲಿತಾಂಶ; ಭಟ್ಕಳದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ  ಸಿಡಿಸಿ ಸಂಭ್ರಮ

ಭಟ್ಕಳ: ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಭಟ್ಕಳದಲ್ಲಿಯೂ ಬಿಜೆಪಿ ಕಾರ್ಯಕರ್ತರು ಪಟಾಕಿ  ಸಿಡಿಸಿ ಸಂಭ್ರಮ ಆಚರಿಸಿದರು.

ಭಟ್ಕಳ ಸಂಶುದ್ದೀನ್ ಸರ್ಕಲ್‌ನಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ವಿನೋದ ಪ್ರಭು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು, ಈ ಸಂದರ್ಬದಲ್ಲಿ ಭಟ್ಕಳ ಬಿಜೆಪಿ ಅಧ್ಯಕ್ಷ ಸುಬ್ರಾಯ ದೇವಾಡಿಗ ಮಾತನಾಡಿದರು, ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

error: