
ಭಟ್ಕಳ: ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿಯೋರ್ವ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಜಾಲಿ ತೆಂಗಿನಹಿತ್ತುವಿನಲ್ಲಿ ನಡೆದಿದೆ. ಮೃತರನ್ನು ಭಾರ್ಗವ ತಂದೆ ನಾರಾಯಣ ನಾಯ್ಕ (20) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಅಂಜುಮನ್ ಕಾಲೇಜಿನ ಬಿಕಾಮ್ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದನು ಎಂದು ತಿಳಿದುಬಂದಿದೆ. ಈ ಕುರಿತು ಮೃತರ ಸಹೋದರ ಭರತ್ ತಂದೆ ನಾರಾಯಣ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ