May 18, 2024

Bhavana Tv

Its Your Channel

ಏ.13ರಿಂದ 19ರವರೆಗೆ ಸಾರದಾಹೊಳೆ ಶ್ರೀ ಕ್ಷೇತ್ರ ಹಳೇಕೋಟೆ ಹನುಮಂತ ದೇವರ ಪುನರ್ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ.

ಭಟ್ಕಳ: ಏ.13ರಿಂದ 19ರವರೆಗೆ ಜಿಲ್ಲೆಯ ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಸಾರದಾಹೊಳೆ ಶ್ರೀ ಕ್ಷೇತ್ರ ಹಳೇಕೋಟೆ ಹನುಮಂತ ದೇವರ ಪುನರ್ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ.

ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಏ.13ರಿಂದ 19ರವರೆಗೆ ನಡೆಯುವ ಜಿಲ್ಲೆಯ ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಸಾರದಾಹೊಳೆ ಶ್ರೀ ಕ್ಷೇತ್ರ ಹಳೇಕೋಟೆ ಹನುಮಂತ ದೇವರ ಪುನರ್ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಾಡಿನ ಹಲವು ಗಣ್ಯರು ಈ ಅದ್ಧೂರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.
ಅವರು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಏ. 13ರಂದು ಕುಲಗುರುಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯಲ್ಲಿ ದೇವಾಲಯಕ್ಕೆ ಕರೆದುಕೊಂಡು ಬರಲಾಗುವುದು, ವಿವಿಧ ಕಲಾ ತಂಡಗಳು, ಅನೇಕ ಸ್ವಸಹಾಯ ಸಂಘಗಳ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ನಿಮಿತ್ತ ಪ್ರತಿ ದಿನ ಮಹಾಅನ್ನಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇಂಧನ ಸಚಿವ ಸುನೀಲ ಕುಮಾರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ,
ಸಂಸದ ಅನಂತಕುಮಾರ ಹೆಗಡೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸರಿಸುಮಾರು ರು, 6ಕೋ. ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣಗೊಂಡಿದ್ದು, ಸರಕಾರ ಈಗಾಗಲೇ ರು. 1 ಕೋ. 20 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ. ಸಹಸ್ರಾರು ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿಕೊAಡರು. ಭಟ್ಕಳ ಮಾವಳ್ಳಿ ಹೋಬಳಿ ನಾಮಧಾರಿ ಸಮಾಜದ ಅಭಿವೃದ್ಧಿ ಸಂಘದ ಅಧ್ಯಕ್ಷ ಸುಬ್ರಾಯ ನಾಯ್ಡ ಗುಮ್ಮನಹಕ್ಕು 6 ದಿನಗಳ ಕಾರ್ಯಕ್ರಮಗಳ ಬಗ್ಗೆ ಮಾತನಾಡಿ, ದೇವಾಲಯದ ಅಭಿವೃದ್ಧಿಗಾಗಿ ಹಿಂದೂ ಸಮಾಜದ ಎಲ್ಲ ಜಾತಿ, ವರ್ಗದ ಜನರು ಸಹಾಯ ಮಾಡಿದ್ದಾರೆ. ಈ ದೇವಾಲಯದ ಅಭಿವೃದ್ಧಿಗಾಗಿ ದುಡಿದ ಸಮಾಜದ ದಿವಂಗತ ಮಹನೀಯರ ಹೆಸರುಗಳನ್ನು 6 ದಿನಗಳ ನಿತ್ಯದ ಕಾರ್ಯಕ್ರಮದ ವೇದಿಕೆಗೆ ಇಡಲಾಗುತ್ತದೆ ಎಂದು ತಿಳಿಸಿದರು. ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೃಷ್ಣ ಎಸ್. ನಾಯ್ಕ, ಗೌರವ ಕಾರ್ಯದರ್ಶಿ ಜೆ.ಜೆ.ನಾಯ್ಕ, ಸುಬ್ರಾಯ ನಾಯ್ಕ ತೆರ್ನಮಕ್ಕಿ ಮೊದಲಾದವರು ಉಪಸ್ಥಿತರಿದ್ದರು.

error: