
ಭಟ್ಕಳ: ಭಟ್ಕಳದ ಸಿವಿಲ್ ಜಡ್ಜ್ ಹಿರಿಯ ವಿಭಾಗದ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಜಗದೀಶ ಶಿವಪೂಜಿ ಅವರಿಗೆ ವರ್ಗಾವಣೆಯಾದ ಪ್ರಯುಕ್ತ ಭಟ್ಕಳ ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಬೀಳ್ಕೊಡುಗೆಯನ್ನು ಸ್ವೀಕರಿಸಿ ಮಾತನಾಡಿದ ಸಿವಿಲ್ ಜಡ್ಜ್ ಹಿರಿಯ ವಿಭಾಗದ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಭಟ್ಕಳದಲ್ಲಿ ಸೇವೆ ಸಲ್ಲಿಸಿದ ಅವಧಿಯು ಉತ್ತಮವಾಗಿದ್ದು ಸದಾ ತನ್ನ ನೆನಪಿನಲ್ಲಿರುತ್ತದೆ ಎಂದರು. ಇಲ್ಲಿನ ವಕೀಲರ ಸಂಘದ ಕಾರ್ಯ, ಸಹಕಾರ ಹಾಗೂ ಪರಸ್ಪರ ಸೌಹಾರ್ದಯುತ ವಾತಾವರಣ ಸದಾ ಸ್ಮರಿಸುವಂತಿದೆ ಎಂದರು. ತನ್ನ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರನ್ನು ಸ್ಮರಿಸಿದ ಅವರು ಉತ್ತಮ ಸಹಕಾರಕ್ಕಾಗಿ ಅಭಿನಂದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ಎಲ್.ನಾಯ್ಕ ಅವರು ವಹಿಸಿದ್ದರು.
ಸಭೆಯಲ್ಲಿ ಹಿರಿಯ ವಕೀಲರಾದ ವಿ.ಎಫ್. ಗೋಮ್ಸ್ ಅವರು ಮಾತನಾಡಿ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಅವಧಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಜಗದೀಶ ಶಿವಪೂಜಿ ಅವರು ನಮ್ಮ ವಕೀಲರ ಸಂಘದ ಸದಸ್ಯರಲ್ಲಿಯೂ ಕೂಡಾ ಸದಾ ನೆನಪಿನಲ್ಲಿರುತ್ತಾರೆ. ಅವರ ಮುಂದಿನ ಸೇವಾ ಅವಧಿಯು ಉತ್ತಮವಾಗಿರಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ಜಗದೀಶ ಶಿವಪೂಜಿ ಅವರನ್ನು ಪ್ರಥಮ ದರ್ಜೆ ನ್ಯಾಯಾಲಯದ ಸಿಬ್ಬಂದಿಗಳ ವತಿಯಿಂದ ಕೂಡಾ ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯವಾದಿ ನಾಗೇಂದ್ರ ನಾಯ್ಕ, ಸರಕಾರಿ ಸಹಾಯಕ ಅಭಿಯೋಜಕ ಶೇಖರ ಹರಿಕಾಂತ, ವಕೀಲರ ಸಂಘದ ಹಿರಿಯ ಹಾಗೂ ಕಿರಿಯ ಸದಸ್ಯರು, ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಡಿ. ಭಟ್ಟ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಕಾರ್ಯದರ್ಶಿ ಎನ್. ಎಸ್. ನಾಯ್ಕ ವಂದಿಸಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ