
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದ ಮಾಲ್ಕಿ ಜಮೀನಿನ ಗುಡ್ಡವೊಂದರಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ

ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು ಗುರುತು ಮತ್ತೆ ಹಚ್ಚದ ಸ್ಥಿತಿಯಲ್ಲಿದೆ. ಮೃತ ಮಹಿಳೆ ಅಂದಾಜು 30 ರಿಂದ 40 ವರ್ಷ ಎಂದು ಅಂದಾಜಿಸಲಾಗಿದೆ. ಅಲ್ಲಿನ ಸ್ಥಳೀಯರು ಮೃತ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಸಿ.ಪಿ.ಐ ಮಾಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಗಳಾದ ರತ್ನ ಕೆ ಹಾಗೂ ಸುಮಾ ಆಚಾರ್ಯ ಭೇಟಿ ನೀಡಿ ಪರಿಶೀಲಿಸಿ ಮೃತ ಮಹಿಳೆಯ ಮೃತ ದೇಹವವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು .ಪೊಲೀಸ ತನಿಖೆ ಚುರುಕುಗೊಂಡಿದೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ