May 6, 2024

Bhavana Tv

Its Your Channel

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ದಿ ಯೋಜನೆಗಳಿಂದಾಗಿ ಕನ್ನಡ ನಾಡಿಗೆ ವಿಶ್ವದಲ್ಲಿ ವಿಶಿಷ್ಠ ಸ್ಥಾನ ದೊರಕಿದೆ – ಡಿ.ಬಿ.ನಾಯ್ಕ

ಭಟ್ಕಳ:ಕನ್ನಡ ಸಾಹಿತ್ಯ ಪರಷತ್ ಭಟ್ಕಳ ಹಾಗೂ ಜಾಲಿ ಸರ್ಕಾರಿ ಪ್ರೌಡಶಾಲೆ ಇವರ ಸಹಯೋಗದಲ್ಲಿ ಜಾಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮೈಸೂರು ಸಂಸ್ಥಾನವನ್ನು ಆಳಿದ ಒಡೆಯರುಗಳಲ್ಲಿ ಅತ್ಯಂತ ಶ್ರೇ಼ಷ್ಠ ಆಡಳಿತವನ್ನು ನೀಡಿ ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕೃಷಿ,ಆರೋಗ್ಯ ಮುಂತಾದ ಸರ್ವಾಂಗೀಣ ಆಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದಲ್ಲದೇ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಸಾಂಸ್ಕೃತಿಕ, ಸಾಹಿತ್ಯಿಕ ಪ್ರಗತಿಗೂ ಅನನ್ಯ ಕೊಡುಗೆ ನೀಡಿದ ಮಹಾನ್ ಚೇತನ. ಅವರ ಜೀವನ, ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಬದುಕಲ್ಲಿ ಸಾಧನೆಯನ್ನು ಮಾಡಬೇಕೆಂದು ನುಡಿದರಲ್ಲದೇ ಸಾಹಿತ್ಯ ಪರಿಷತ್ತು ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ನುಡಿದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾದ ಶಾಂತಾರಾಮ ನಾಯ್ಕ ಮಾತನಾಡಿ ಕೃಷ್ಣರಾಜ ಒಡೆಯರ್ ಆವರು ದೂರದೃಷ್ಟಿಯುಳ್ಳ ರಾಜರಾಗಿ ಬಾಲ್ಯ ವಿವಾಹ, ಮಹಿಳಾ ಶೊಷಣೆಗೆ ಕಾರಣವಾದ ಅನಿಷ್ಟ ಪದ್ದತಿಗಳನ್ನು ನಿವಾರಿಸಿದರಲ್ಲದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಗಳನ್ನು ಕೈಗೊಂಡರಲ್ಲದೇ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸಿದೆ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಈ ನಾಡಿನ ಭೌತಿಕ ಪ್ರಗತಿಗೆ ಕ್ರಷ್ಣರಾಜ ಸಾಗರ, ಬೌದ್ಧಿಕ ಅಭಿವೃದ್ಧಿಗೆ ಮೈಸೂರು ವಿಶ್ವ ವಿದ್ಯಾನಿಲಯ ಹಾಗೂ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ ಕ್ರಷ್ಣರಾಜ ಒಡೆಯರ್ ಅವರ ಆಳ್ವಿಕೆಯ ಕಾಲ ಕನ್ನಡ ನಾಡಿನ ಸುವರ್ಣಯುಗ. ಮತ್ರವಲ್ಲ ರಾಜಪ್ರಭುತ್ವದಲ್ಲಿಯೇ ಪ್ರಜೆಗಳ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಿ ರಾಷ್ಟçದಲ್ಲಿಯೇ ಮೊದಲು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತು ಸಂಸತ್ತಿನ ವ್ಯವಸ್ಥೆಯನ್ನು ಅಳವಡಿಸಿಕೊಂಡವರಾಗದ್ದಾರೆ. ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಅವರ ಕೊಡುಗೆಗಳನ್ನು ಸ್ಮರಿಸುವುದೇ ಇಂದಿನ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ನುಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದ ಮುಖ್ಯಾಧ್ಯಾಪಕಿ ಶಾರದಾ ನಾಯ್ಕ ಮಾತನಾಡಿದರು. ವಿದ್ಯಾರ್ಥಿಗಳಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಸಾಧನೆಯ ಕಿರು ವಿಡಿಯೋವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ ಅರಂಭದಲ್ಲಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಾಹಿತಿ ಶ್ರೀಧರ ಶೇಟ್ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಟಿ.ಡಿ.ದೇವಡಿಗ, ಮೋಹಿನಿ ಬಾನಾವಳಿಕರ್, ಜಯಂತಿ ನಾಯಕ, ಶೋಭಾ ಗೌಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.

error: