May 6, 2024

Bhavana Tv

Its Your Channel

ಸರಕಾರಿ ಪ್ರೌಢಶಾಲೆ ಬೆಳಕೆಯಲ್ಲಿ ಪರಿಸರ ದಿನಾಚರಣೆ

ಭಟ್ಕಳ: ಸರಕಾರಿ ಪ್ರೌಢಶಾಲೆ ಬೆಳಕೆಯಲ್ಲಿ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಎನ್ ಎಸ್ ಎಸ್ ಘಟಕ ಹಾಗೂ ವನಸಿರಿ ಇಕೋ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಯಿತು.

ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹೊನ್ನಪ್ಪ ನಾಯ್ಕ ಶಾಲೆಯ ಆವರಣದಲ್ಲಿ ಗಿಡವನ್ನು ನೆಟ್ಟು ಜಾಗೃತಿ ಜಾಥಾಗೆ ಚಾಲನೆ ನೀಡಿದರು. ಪರಿಸರ ಸಂರಕ್ಷಣೆ ನಮ್ಮ ಹೊಣೆ ಮತ್ತು ಜವಾಬ್ಧಾರಿಯು ಕೂಡಾ ಆಗಿದೆ. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅಧ್ಯಯನ ಮಾಡಬೇಕು ಎಂದು ಹೇಳಿದರು

ವಿದ್ಯಾರ್ಥಿಗಳಿಗೆ ಇರುವುದೊಂದೇ ಭೂಮಿ ಭೂಮಿಯ ಸಂರಕ್ಷಣೆ ನಮ್ಮೆಲ್ಲೆರ ಹೊಣೆ, ಮಾನವನ ದುರಾಸೆಯಿಂದ ಭೂಮಾಲಿನ್ಯ ಮಿತಿ ಮಿರುತ್ತಿದೆ ಭೂಮಿಯ ತಾಪಮಾನ ಹೆಚ್ಚಾಗಿದೆ. ಗಿಡ ನೆಡುವುದರಿಂದ ಪರಿಸರ ಮಾಲಿನ್ಯ ನಿಯಂತ್ರಿಸ ಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದರು.

ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಪ್ರಕಾಶ ಶಿರಾಲಿ ಸ್ವಾಗತಿಸಿದರು ರಜನಿ ಶೆಟ್ಟಿ ವಂದನಾರ್ಪಣೆ ಮಾಡಿದರು. ಸಿ ಎಸ್ ಬೈಲೂರು ಕಾರ್ಯಕ್ರಮ ವನ್ನು ನಿರೂಪಿಸಿದರು

error: