
ಭಟ್ಕಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಂಗ ಸಂಸ್ಥೆಯಾದ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ.ಆರ್.ಮಾನ್ವಿ ಕಾರ್ಯದರ್ಶಿಯಾಗಿ ಶೈಲೇಶ ವೈದ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ. ಸುಬ್ರಾಯ ಭಟ್ಟ ಬಕ್ಕಳ ಅವರ ಸೂಚನೆಯ ಮೇರೆಗೆ ಜೂ.೧೪ರಂದು ಸಂಜೆ ಭಟ್ಕಳದ ಖಾಸಗೀ ಹೋಟೇಲ್ ನಡೆದ ತಾಲೂಕಾ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಭವಾನಿಶಂಕರ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ಆರ್.ಮಾನ್ವಿಯವರ ಹೆಸರನ್ನು ರಾಧಾಕೃಷ್ಣ ಭಟ್ಟ ಸೂಚಿಸಿದರು. ಫಯ್ಯಾಜ್ ಮುಲ್ಲಾ ಅನುಮೋದಿಸಿದರು. ಉಪಾಧ್ಯಕ್ಷರಾಗಿ ಮೋಹನ ನಾಯ್ಕ, ಕಾರ್ಯದರ್ಶಿಯಾಗಿ ಶೈಲೇಶ ವೈದ್ಯ, ಖಜಾಂಚಿಯಾಗಿ ರಿಜ್ವಾನ್ ಗಂಗಾವಳಿ ಅವರು ಕೂಡಾ ಅವಿರೋಧವಾಗಿ ಆಯ್ಕೆಯಾದರು. ಸಂಘದ ಗೌರವಾಧ್ಯಕ್ಷ ಸ್ಥಾನಕ್ಕೆ ಸ್ಥಾಪಕ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಅವರನ್ನು ಆಯ್ಕೆ ಮಾಡಲಾಯಿತು.
ನಿಕಟಪೂರ್ವ ಅಧ್ಯಕ್ಷ ಭಾಸ್ಕರ ನಾಯ್ಕ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ರಾಧಾಕೃಷ್ಣ ಭಟ್ಟ ಮಾತನಾಡಿ ಸಂಘದ ಸದಸ್ಯರು ಪರಸ್ಪರ ವಿಶ್ವಾಸದಿಂದ, ಸಂಘದ, ಸದಸ್ಯರ ಹಾಗೂ ಸಮಾಜದ ಹಿತ ಕಾಪಾಡುವಂತೆ ಕರೆ ನೀಡಿದರು.
ನೂತನ ಅಧ್ಯಕ್ಷ ಮಹಮ್ಮದ್ ರಜಾ ಮಾನ್ವಿ ಮಾತನಾಡಿ ಸಂಘದ ಮುಂದಿನ ಕಾರ್ಯಚಟುವಟಿಕೆಗಳನ್ನು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೈಗೊಳ್ಳುವ ಭರವಸೆಯನ್ನು ನೀಡಿದರು.
ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಜಿಲ್ಲಾ ಉಪಾಧ್ಯಕ್ಷ ಭವಾನಿಶಂಕರ ಮಾತನಾಡಿ ತಾಲೂಕಾ ಸಂಘಗಳು ಜಿಲ್ಲಾ ಸಂಘದೊAದಿಗೆ ಸೇರಿ ಉತ್ತಮ ಕೆಲಸಗಳನ್ನು ಮಾಡುವಂತೆ ಹಾಗೂ ಮುಂದೆ ಬರುವ ಜಿಲ್ಲಾ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಹ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ನಂತರ ನೂತನ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ ೨ರಂದು ಪತ್ರಿಕಾ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಸಂಘದ ವತಿಯಿಂದ ಹಿರಿಯ ಸಮಾಜ ಸೇವಕ ಸೈಯದ್ ಹಸನ್ ಬರ್ಮಾವರ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸುವ ಕುರಿತೂ ನಿರ್ಣಯಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಫಯಾಜ್ ಮುಲ್ಲಾ, ರಾಘವೇಂದ್ರ ಹೆಬ್ಬಾರ್, ಅತೀಕುರ್‌ರೆಹಮಾನ್ ಶಾಬಂದ್ರಿ, ಇನಾಯತುಲ್ಲಾ ಗವಾಯಿ ಮುಂತಾದವರು ಉಪಸ್ಥತರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ