May 10, 2024

Bhavana Tv

Its Your Channel

ವೆಲ್ಫೇರ್ ಪಾರ್ಟಿ ಉ.ಕ.ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ಮಾಜೀದ್ ನೇಮಕ

ಭಟ್ಕಳ:ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್‌ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ರಾಜಿನಾಮೆ ನೀಡಿದ್ದು ತತ್ ಕ್ಷಣದಿಂದಲೇ ಜಾರಿಯಾಗುವಂತೆ ಅಬ್ದುಲ್ ಮಾಜೀದ್ ರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಈ ಕುರಿತಂತೆ ಆದೇಶ ಪತ್ರವನ್ನು ನೀಡಿರುವ ರಾಜ್ಯಾಧ್ಯಕ್ಷ ನ್ಯಾಯವಾದಿ ತಾಹಿರ್ ಹುಸೇನ್ ಪಕ್ಷ ಸಂಘಟನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದ್ದಾರೆ.

error: