May 6, 2024

Bhavana Tv

Its Your Channel

ಎಸ್. ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಅಭಿನಂದನಾ ಕಾರ್ಯಕ್ರಮ

ಭಟ್ಕಳ:- ಆರ್.ಎನ್.ಎಸ್ ಪದವಿಪೂರ್ವ ಕಾಲೇಜು ಮತ್ತು ಆರ್.ಎನ್.ಎಸ್ ವಿದ್ಯಾನಿಕೇತನ ಸಹಯೋಗದೊಂದಿಗೆ ಎಸ್. ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆರ್.ಎನ್.ಎಸ್ ಸಮೂಹ ಸಂಸ್ಥೆಯ ತಾಂತ್ರಿಕ ಅಧಿಕಾರಿಯಾಗಿರುವ ಪ್ರೊ.ಮುರುಳಿಕೃಷ್ಣ ಮಾತನಾಡಿ; ಆರ್.ಎನ್.ಎಸ್ ಸಂಸ್ಥೆ ಎಲ್ಲ ರೀತಿಯ ಆಧುನಿಕ ಸವಲತ್ತುಗಳನ್ನು ಹೊಂದಿದೆ. ಇಂತಹ ಸಂಸ್ಥಯಲ್ಲಿ ಶಿಕ್ಷಣ ಪಡೆಯುತ್ತಿರುವ ನೀವು ಅದೃಷ್ಟವಂತರು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು..

ಕಾರ್ಯಕ್ರಮದಲ್ಲಿ ಆರ್.ಎನ್.ಎಸ್ ಸಮೂಹ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿಯಾಗಿರುವ ಡಾ. ಸುಧೀರ್ ಪೈರವರು ಮಾತನಾಡಿ; ಸಿಇಟಿ, ನೀಟ್, ಜೆಇಇ ತರಬೇತಿಗಳನ್ನು ಒಳಗೊಂಡAತೆ ಶ್ರೇಷ್ಠ ಮಟ್ಟದ ಶಿಕ್ಷಣವನ್ನು ನೀಡಲು ಆರ್.ಎನ್.ಎಸ್ ಪದವಿ ಪೂರ್ವ ಕಾಲೇಜು ಸಿದ್ಧಗೊಂಡಿದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆರ್.ಎನ್.ಎಸ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಶ್ರೀಯುತ ಕರಣ್ ಶೆಟ್ಟಿಯವರು ಮಾತನಾಡಿ ಇಲ್ಲಿ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳಿಗೆ ಆರ್ ಎನ್ ಎಸ್ ಸಮೂಹದ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಅಭಿನಂದಿಸಲಾಯಿತು. ವಿಶೇಷವಾಗಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸುಹಾಸ್ ಕುಮಾರ್ ಮತ್ತು ಎಸ್.ಎಸ್.ಎಲ್.ಸಿ ಅಲ್ಲಿ ಅತಿಹೆಚ್ಚು ಅಂಕಗಳಿಸಿದ ಆಕಾಶ ಶೇಟ್ ಅವರಿಗೆ ಬಂಗಾರದ ಪದಕ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಆರ್.ಎನ್.ಎಸ್ ಸಮೂಹ ಸಂಸ್ಥೆ ಮುರುಡೇಶ್ವರ ವಿಭಾಗದ ಆಡಳಿತ ಅಧಿಕಾರಿಯಾಗಿರುವ ದಿನೇಶ್ ಗಾಂವಕರ್, ಆರ್.ಎನ್.ಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ್ ಪಿ, ಆರ್.ಎನ್.ಎಸ್ ವಿದ್ಯಾನಿಕೇತನದ ಪ್ರಾಂಶುಪಾಲೆಯಾದ ಗೀತಾ ಕಿಣಿ, ಆರ್.ಎನ್.ಎಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಕೆ. ಎಸ್. ಉಪಸ್ಥಿತರಿದ್ದರು.

error: