April 19, 2024

Bhavana Tv

Its Your Channel

ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಪಡೆದು ಸಮಾಜದ ಹೆಸರು ಉಳಿಸುವ ಕೆಲಸ ಮಾಡಬೇಕು – ಶಾಸಕ ಸುನೀಲ ನಾಯ್ಕ

ಭಟ್ಕಳ: ವಿದ್ಯಾರ್ಥಿಗಳು ತಮ್ಮ ಶಿಕ್ಷಣದೊಂದಿಗೆ ನಮ್ಮ ಸಂಸ್ಕಾರವನ್ನು ಉಳಿಸಿ ಬೆಳೆಸಿಕೊಳ್ಳುವುದರಲ್ಲಿ ಪ್ರಯತ್ನಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು.

ಅವರು ಭಟ್ಕಳ ಆಸರಕೇರಿ ನಿಚ್ಚಲಮಕ್ಕಿ ನಾಮಧಾರಿ ಸಭಾಭವನದಲ್ಲಿ ನಡೆದ ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಮಾಜದ ಪ್ರತಿ ಭಾಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ನನ್ನ ಭಾಗ್ಯವಾಗಿದೆ. ಅದರಲ್ಲೂ ನನ್ನ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ವಿಚಾರ ಎಂದ ಸಮಾಜದ ವಿದ್ಯಾರ್ಥಿಗಳನ್ನು ಸಮಾಜವು ಗುರುತಿಸುವಂತಹ ಉತ್ತಮ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳು ಸಹ ಸಮಾಜದ ಗುರುತಿಸುವಿಕೆಯ ಕಾರ್ಯಕ್ಕೆ ಚಿರರುಣಿಯಾಗಿರಬೇಕಾಗಿದೆ. ಸಮಾಜವು ನೀಡಿದಂತಹ ಪುರಸ್ಕಾರಗಳನ್ನು ವಿದ್ಯಾರ್ಥಿಗಳೂ ಪಡೆದು ಮುಂದೆ ಅವರು ಉತ್ತಮ ಶಿಕ್ಷಣ ಪಡೆದು ಸಮಾಜವನ್ನು ನೆನಪಿಸಿಕೊಳ್ಳಬೇಕಾಗಿದೆ . ಸಮಾಜವು ಗುರುತಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಿ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಇಂದಿನ ವಿದ್ಯಾರ್ಥಿಗಳು ನಮ್ಮ ಧರ್ಮ, ನಮ್ಮ ಸಂಸ್ಕೃತಿಯನ್ನು ಯಾವತ್ತೂ ಮರೆಯಬಾರದು ಇದನ್ನು ಉಳಿಸಿ ಬೆಳೆಸಿಕೊಳ್ಳಬೇಕು. ಇಂದು ಶಿಕ್ಷಣಕ್ಕೆ ಸರಕಾರ ಎಲ್ಲ ಸವಲತ್ತುಗಳನ್ನು ನೀಡುತ್ತಿದ್ದು ಸಮಾಜದ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ಉತ್ತಮ ಶಿಕ್ಷಣ ಪಡೆಯಬೇಕು. ಶಿಕ್ಷಣಕ್ಕೆ ನನ್ನ ಸಹಾಯ ಸಹಕಾರ ಎಂದೂ ಇರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ರಾಜ್ಯ ಪಶ್ವಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರವನ್ನು ದೇಶದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪಡೆಯುತ್ತಿರುವುದು ನಿಜಕ್ಕೂ ನಿಮಗೆ ಪುಣ್ಯದ ಕಾರ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಸಾಧನೆಯನ್ನು ಮಾಡಲು ಗುರಿ ಹೊಂದಬೇಕು ಎಂದರಲ್ಲದೇ ತಾವು ಯಾವುದೇ ದೊಡ್ಡ ಹುದ್ದೆಗೆ ಹೋದರೂ ತಮ್ಮನ್ನು ಬೆಳೆಸಿದ ತಂದೆ ತಾಯಿ ಹಾಗೂ ಸಮಾಜಕ್ಕೆ ಯಾವತ್ತೂ ಚಿರರುಣಿಯಾಗಿರಬೇಕಾಗಿರುವುದು ತಮ್ಮ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದ ನಾಮಧಾರಿ ಸಮಾಜದ ಗೌರವಾಧ್ಯಕ್ಷ ಎಂ.ಆರ್. ನಾಯ್ಕ ಮಾತನಾಡಿ ಇಂದಿನ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹೊಂದಲು ಬಹಳಷ್ಟು ಅವಕಾಶಗಳಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಶಾಸಕ ಜೆ.ಡಿ. ನಾಯ್ಕ ಮಾತನಾಡಿ ‘ ವಿದ್ಯಾರ್ಥಿಗಳು ಸಮಾಜದಿಂದ ಪಡೆದ ಪುರಸ್ಕಾರವನ್ನು ಮುಂದಿನ ದಿನಗಳಲಲ್ಲಿ ಅದನ್ನು ಸಮಾಜಕ್ಕೆ ನೀಡುಂತವರಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಗುರುಮಠದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣಾ ನಾಯ್ಕ ಮಾತನಾಡಿ ಇಂದು ಸಮಾಜವನ್ನು ಮುಜುಗರಕ್ಕೆ ಸಿಲುಕಿಸುವಂತಹ ಕೆಟ್ಟ ಕೆಲಸವನ್ನು ನಮ್ಮ ಸಮಾಜದವರು ಮಾಡದೇ ಉತ್ತಮ ನಾಗರಿಕರಾಗಿ ಸ್ವಾಭಿಮಾನದಿಂದ ಬಾಳಬೇಕು. ಇಂದಿನ ಶಾಲಾ ಕಾಲೇಜುಗಳಿಗೆ ಬರುವ ಹದಿ ಹರೆಯದ ವಿದ್ಯಾರ್ಥಿಗಳನ್ನು ಅವರ ಪಾಲಕರು ದಿನನಿತ್ಯ ಗಮನಿಸಿ ಅವರು ದುಷ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ನಾಮಧಾರಿ ಸಮಾಜದ ದೇವಸ್ತಾನದ ಮುಖ್ಯ ದ್ವಾರವನ್ನು ತನ್ನ ಸ್ವಂತ ಖರ್ಚಿನಿಂದ ಕಟ್ಟಿಸುತ್ತಿರುವ ಶಾಸಕ ಸುನೀಲ್ ನಾಯ್ಕರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿ ಸಮಾಜದ ವಿದ್ಯಾರ್ಥಿಗಳನ್ನು, ಹೊಸದಾಗಿ ಸರಕಾರಿ ಕೆಲಸಕ್ಕೆ ನೇಮಕಗೊಂರ‍್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ 625 ಅಂಕಗಳಿಗೆ 625 ಅಂಕ ಪಡೆದ ಭಟ್ಕಳದ ಮೂಡಭಟ್ಕಳದ ಬಿರ್ಸುಮನೆಯ ನಾಗೇಶ ನಾಯ್ಕ ದಂಪತಿಗಳ ಪುತ್ರಿಯಾದ ಅಕ್ಷತಾ ನಾಗೇಶ ನಾಯ್ಕ ಹಾಗು ಇವರ ಪಾಲಕರನ್ನು ಸಮಾಜದ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜದ 198ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.

ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಮಾಸ್ತಿ ನಾಯ್ಕ ಎಲ್ಲರನ್ನು ಸ್ವಾಗತಿಸಿದರು. ಉಪಾಧ್ಯಕ್ಷ ಭವಾನಿಶಂಕರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ನಾಯ್ಕ ಪ್ರಾರ್ಥನೆ ಹಾಡಿದರು. ಶಿಕ್ಷಕರಾದ ನಾರಾಯಣ ನಾಯ್ಕ ಹಾಗೂ ಗಂಗಾಧರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಎಂ.ಕೆ ನಾಯ್ಕ ವಂದನಾರ್ಪಣೆ ಮಾಡಿದರು.

error: