May 1, 2024

Bhavana Tv

Its Your Channel

ಭಟ್ಕಳದಲ್ಲಿ ದೇವರಾಜು ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ

ಭಟ್ಕಳ: ದೇವರಾಜು ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಿಂದುವಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದೇವರಾಜು ಅರಸು ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ದೇವರಾಜು ಅರಸು ಅವರ ಕುಟುಂಬ ದೊಡ್ಡ ಜಮೀನ್ದಾರರ ಕುಟುಂಬವಾಗಿತ್ತು. ಮುಖ್ಯ ಮಂತ್ರಿಯಾದಾಗ ಅವರು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಕೂಡಾ ಜಮೀನು ದೊರೆಯಬೇಕು ಎನ್ನುವ ಮಹದಾಸೆಯಿಂದ ಉಳುವವನೇ ಹೊಲದೊಡೆಯ ಎನ್ನುವ ಕಾಯಿದೆಯನ್ನು ಜಾರಿಗೊಳಿಸಿದರು. ಬಹಳಷ್ಟು ವಿರೋಧದ ನಡುವೆಯೂ ದಿಟ್ಟ ನಿರ್ಧಾರ ಕೈಗೊಂಡ ಅವರು ಎಂದಿಗೂ ಜನಮಾನಸದಲ್ಲಿ ಉಳಿಯುತ್ತಾರೆ ಎಂದರು.
ತಮ್ಮ ಸುಧೀರ್ಘ ಮುಖ್ಯ ಮಂತ್ರಿಯ ಅವಧಿಯಲ್ಲಿ ಅನೇಕ ಸಾಮಾಜಿಕ ಸುಧಾರಣೆಯನ್ನು ತಂದಿದ್ದ ಅವರು ಜೀತ ಪದ್ಧತಿ ನಿರ್ಮೂಲನೆ, ಸಾಮಾಜಿಕ ಪಿಡುಗಗಳ ನಿವಾರಣೆ ಸೇರಿದಂತೆ ಅನೇಕ ಬದಲಾವಣೆಗಳನ್ನು ಸಹ ತಂದರು ಎಂದೂ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಡಾ. ಸುಮಂತ್ ಬಿ.ಇ. ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಮಾತನಾಡಿದರು. ವಿದ್ಯಾರ್ಥಿನಿ ಕುಮಾರಿ ಅಂಜಲಿ ದೇವರಾಜು ಅರಸು ಅವರು ಜೀವನದ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮನೋಹರ ಅಗೇರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿಯರಾದ ಸ್ನೇಹ ಸಂಗಡಿಗರು ಪ್ರಾರ್ಥನೆ ಹಾಡಿದರು. ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿ ಮಂಜುನಾಥ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸತಿ ನಿಲಯದ ಮೇಲ್ವಿಚಾರಕಿ ದೇವಕಿ ಅವರು ವಂದಿಸಿದರು.

error: