
ಭಟ್ಕಳ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಮುಂದಿನ 15 ದಿನಗಳ ಕಾಲ ಸೇವಾ ಪಾಕ್ಷಿಕ ಹೆಸರಿನಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಟ್ಕಳ ಬಿಜೆಪಿ ಮಂಡಲದ ಅಧ್ಯಕ್ಷ ಸುಬ್ರಾಯ ದೇವಡಿಗ ಹೇಳಿದರು.
ಭಟ್ಕಳ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನರೇಂದ್ರ ಮೋದಿ ಜನ್ಮದಿನಾಚರಣೆ,
ಹಾಗೂ ಸೆ. 25ಕ್ಕೆ ಪಂಡಿತ ದೀನದಯಾಳ ಉಪಾಧ್ಯಾಯ ಜನ್ಮ ದಿನಾಚರಣೆ, ಅ. 2ಕ್ಕೆ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಕಾರ್ಯಕ್ರಮದ ಯಶಸ್ಸಿಗೆ ಪಕ್ಷದ ಯುವ ಮುಖಂಡರುಗಳ ನೇತೃತ್ವದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗಿ 8 ವರ್ಷ ಕಳೆದಿದ್ದು, ದೇಶ ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ. 12 ಕೋಟಿ ಶೌಚಾಲಯವನ್ನು ನಿರ್ಮಿಸಲಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭಗಳನ್ನು ಸವಾಲಾಗಿ ಸ್ವೀಕರಿಸಿ ಲಸಿಕೆಯನ್ನು ಉತ್ಪಾದಿಸಿ ವಿತರಣೆ ಮಾಡಲಾಗಿದೆ.
ಆಝಾದಿ ಕಾ ಅಮೃತ ಮಹೋತ್ಸವ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ 75 ಕೆರೆಗಳ ಪುನರುತ್ಥಾನಕ್ಕೆ ದೃಢ ಹೆಜ್ಜೆಯನ್ನು ಇಡಲಾಗಿದ್ದು, ಭಟ್ಕಳದಲ್ಲಿಯೂ ಸೇವಾ ಪಾಕ್ಷಿಕ ಅವಧಿಯಲ್ಲಿ ಕೆರೆಗಳ ಶುದ್ದೀಕರಣ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರದಂತಹ ಕಾರ್ಯಕ್ರಮ, ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಸಂಘಟಿಸಲಾಗುವುದು.
ನರೇಗಾ, ಕೃಷಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗಳಿಗೆ ಕೇಂದ್ರದಿAದ ಹೆಚ್ಚಿನ ಅನುದಾನ ರಾಜ್ಯಕ್ಕೆ ಹರಿದು ಬಂದಿದೆ ಎಂದು ವಿವರಿಸಿದರು. ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಗಣಪತಿ ದೇವಡಿಗ ಬೆಂಗ್ರೆ ಗೋವರ್ಧನ ನಾಯ್ಕ, ಭಟ್ಕಳ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮೋಹನ ನಾಯ್ಕ ಸರ್ಪನಕಟ್ಟೆ, ದಿನೇಶ ನಾಯ್ಕ ಮುಂಡಳ್ಳಿ, ಶ್ರೀಕಾಂತ ನಾಯ್ಕ ಶ್ರೀನಿವಾಸ ನಾಯ್ಕ, ವಿಜೇತ ಶೆಟ್ಟಿ ಉಪಸ್ಥಿತರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ