March 19, 2025

Bhavana Tv

Its Your Channel

ಅಂತರಾಷ್ಟ್ರೀಯ ಕಡಲತೀರ ಸ್ವಚ್ಚತಾ ಅಂಗವಾಗಿ ಗೋರ್ಟೆ ಕಡಲ ತೀರ ಸ್ವಚ್ಚತೆ ಕಾರ್ಯಕ್ರಮ

ಭಟ್ಕಳ:ಅಂತರಾಷ್ಟ್ರೀಯ ಕಡಲತೀರ ಸ್ವಚ್ಚತಾ ಅಂಗವಾಗಿ ಭಟ್ಕಳ ಕರಾವಳಿ ಕಾವಲು ಪಡೆ ಪೊಲೀಸರು ಹಾಗೂ ಸ್ಥಳೀಯರು ಎಲ್ಲರು ಸೇರಿ ಗೋರ್ಟೆ ಕಡಲ ತೀರ ಸ್ವಚ್ಚತೆ ಕಾರ್ಯಕ್ರಮ ನಡೆಯಿತು.
ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೊಲೀಸ್ ನಿರೀಕ್ಷಕ ಕೃಷ್ಣಾನಂದ ನಾಯ್ಕ ಮಾತನಾಡಿ
ಪ್ರತಿಯೊಬ್ಬರೂ ಸ್ವಯಂ ಪ್ರೇರಣೆ ಹಾಗೂ ಕಾಳಜಿಯಿಂದ ಸಮದ್ರ ತೀರಗಳ ಸ್ವಚ್ಛತಾ ಕಾರ್ಯವನ್ನು ಆದ್ಯತೆಯ ಮೇರೆಗೆ ಕೈಗೊಂಡು, ಪ್ರಕೃತಿದತ್ತವಾಗಿ ಬಂದಿರುವ ನೈಸರ್ಗಿಕ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.
ನಂತರ ಪಿ.ಎಸೈ ಅಣ್ಣಪ್ಪ ಮೊಗೇರ್ ಮಾತನಾಡಿ ಸಮುದ್ರ ತೀರಾ ಹಾಗೂ ಬೀಚ್‌ಗಳನ್ನು ಸ್ವಚ್ಛವಾಗಿಡಲು ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಮನವಿ ಮಾಡಿದರು. ಕಡಲತೀರದುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್,ಬಟ್ಟೆ,ಬಾಟಲ್,ಬಲೆ ಸೇರಿದಂತೆ ತರಗೆಲೆಯ ತ್ಯಾಜ್ಯವನ್ನ ಒಟ್ಟುಗೂಡಿಸಿ ಬೀಚ್ ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿದಂತೆ ಮುಂತಾದವರು ಉಪಸ್ಥಿತಿ ಇದ್ದರು.

error: