
ಭಟ್ಕಳ: ಸ್ವಚ್ಛತಾ ಅಭಿಯಾನದ ಅಂಗವಾಗಿ ಇಂಡಿಯಾ Vs ಗಾರ್ಬೇಜ್ ಕಾರ್ಯಕ್ರಮದ ಅಡಿಯಲ್ಲಿ ಇಂದು ಜೆಸಿ ಐ ಭಟ್ಕಳ ಸಿಟಿ ಹಾಗೂ ಪುರಸಭೆಯ ಸಹಭಾಗಿತ್ವದಲ್ಲಿ ನ್ಯೂ ಇಂಗ್ಲೀಷ ಪಿಯು ಕಾಲೇಜು ಹಾಗೂ ಅಂಜುಮಾನ್ ಬಾಯ್ಸ್ ಕಾಲೇಜು ವಿದ್ಯಾರ್ಥಿಗಳ ಜೊತೆಗೂಡಿ ಶ್ರೀ ಗುರು ಸುಧೀಂದ್ರ ಕಾಲೇಜ್ ಆವರಣದಿಂದ ಸರ್ಕಲ್ ಮಾರ್ಗವಾಗಿ ಪುರಸಭೆ ಆವರಣದವರೆಗೆ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳ ಬೀದಿ ನಾಟಕ ಮೂಲಕ ಪ್ಲಾಸ್ಟಿಕ್ ಇತ್ಯಾದಿ ಕಸಗಳಿಂದ ಪರಿಸರವನ್ನು ಸಂರಕ್ಷಿಸಿಕೊಳ್ಳುವ ಬಗ್ಗೆ ಜನಜಾಗೃತಿ ಜೊತೆಗೆ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ದಿ ನ್ಯೂ ಇಂಗ್ಲಿಷ್ ಕಾಲೇಜ್ ಇದರ ಪ್ರಾಂಶುಪಾಲರಾದ ವೀರೇಂದ್ರ ಶಾನಭಾಗ ಅವರು ಮಾತನಾಡಿ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯಗಳ ಬಳಕೆಯಿಂದ ಪರಿಸರದ ಮೇಲಾಗುವ ಪರಿಣಾಮಗಳ ಬಗ್ಗೆ ಸಾಕ್ಷಿ ಸಮೇತ ವಿವರಣೆ ನೀಡಿ ಕಸ ವಿಲೇವಾರಿ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳುವ ಅಗತ್ಯತೆಯ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಜೆಸಿಐ ಭಟ್ಕಳ ಸಿಟಿಯ ಅಧ್ಯಕ್ಷರಾದ ಪಾಂಡುರAಗ ನಾಯ್ಕ, ಪುರಸಭೆಯ ಆರೋಗ್ಯಾಧಿಕಾರಿಯಾದ ಸೋಜಿಯಾ , ಜೆಸಿಐ ಎಸ್ ಎಮ್ ಎ ಚೇರ್ಮನ್ ಸೆನೆಟರ್ ಅಬ್ದುಲ್ ಜಬ್ಬರ್ ಸಾಹೇಬ್, ಜೆಸಿ ಭಟ್ಕಳ ಸಿಟಿಯ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಸುರೇಶ್ ಪೂಜಾರಿ, ಕಾರ್ಯದರ್ಶಿ ಜೆಸಿ ಮನೋಹರ್ ನಾಯ್ಕ, ಅಂಜುಮನ್ ಶಾಲೆಯ ಶಿಕ್ಷಕರಾದ ಅಬ್ದುಲ ವಾಫಿ, ಜೆಸಿಐ ಭಟ್ಕಳ ಸಿಟಿಯ ಸದಸ್ಯರುಗಳು ಪುರಸಭೆಯ ಸಿಬ್ಬಂದಿಗಳು, ದಿ ನ್ಯೂ ಇಂಗ್ಲಿಷ್ ಕಾಲೇಜಿನ ಶಿಕ್ಷಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸಾರ್ವಜನಿಕರು, ಹಾಜರಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ