March 19, 2025

Bhavana Tv

Its Your Channel

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅದ್ವಿತೀಯ ಸಾಧನೆ ಮಾಡಿದ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಭಟ್ಕಳದ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಸ್.ಡಿ.ಎಮ್. ಕಾಲೇಜು, ಹೊನ್ನಾವರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅದ್ವಿತೀಯ ಸಾಧನೆಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಬಾಲಕಿಯರ ವಿಭಾಗದಲ್ಲಿ ಉನ್ನತಿ ನಾಯ್ಕ ಚೆಸ್‌ನಲ್ಲಿ ಪ್ರಥಮ ಹಾಗೂ ಅನನ್ಯ ಟಿ. ಮತ್ತು ಡಿ ನೇಹಾ, ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಗೈದಿದ್ದಾರೆ. ಬಾಲಕರ ವಿಭಾಗದಲ್ಲಿ ಗಗನ ಮೊಗೇರ, ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ನಿತೀನ್ ದೇವಡಿಗ ಮತ್ತು ಮನೋಜ್ ಪೂಜಾರಿ ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ಎಲ್ಲಾ 6 ವಿದ್ಯಾರ್ಥಿಗಳು ಮುಂಬರುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇರತ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

error: