February 28, 2024

Bhavana Tv

Its Your Channel

ಪ್ರತಿಭಾ ಪುರಸ್ಕಾರ ನಿವೃತ್ತ ಸರ್ಕಾರಿ ನೌಕರರಿಗೆ ಹಾಗೂ ಸಾಧರಿಗೆ ಸನ್ಮಾನ

ಭಟ್ಕಳ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ವತಿಯಿಂದ ತಾಲೂಕಿನ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಗರಿಷ್ಠ ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ತಾಲೂಕಿನ ನಿವೃತ್ತ ಸರ್ಕಾರಿ ನೌಕರರಿಗೆ ಹಾಗೂ ಸಾಧರಿಗೆ ಸನ್ಮಾನ ಹಾಗೂ ವಾರ್ಷಿಕ ಸಾಮಾನ್ಯ ಸಭೆ ತಾಲೂಕಾ ಆಡಳಿತ ಸೌಧದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ತಹಶೀಲ್ದಾರ್ ಸುಮಂತ ಬಿ ಉದ್ಘಾಟಿಸಿ ಮಾತನಾಡಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ ರೀತಿಯಾಗಿ ಗುರುತಿಸಿ ಗೌರವಿಸುದರಿಂದ ಮತ್ತಷ್ಟು ವಿದ್ಯಾಭ್ಯಾಸ ಮಾಡಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದ ಅವರು ವಿದ್ಯಾರ್ಥಿಗಳಾದವರು ತಮ್ಮ ಶಿಕ್ಷಣ ಬದುಕಿನಲ್ಲಿ ವಿದ್ಯಾಭ್ಯಾಸ ಮಾಡುವ ವೇಳೆಯಲ್ಲಿ ಸರಿಯಾಗಿ ವಿದ್ಯಾಭ್ಯಾಸ ಮಾಡಬೇಕು ಅದೇ ರೀತಿ ಆಟ ಆಡುವ ಸಮಯದಲ್ಲಿ ಆಟವಾಡಬೇಕು ಮತ್ತು ಎಂಜಾಯ್ ಮಾಡುವ ವೇಳೆ ಎಂಜಾಯ್ ಮಾಡಬೇಕು. ಈ ಮೂರನ್ನು ಬ್ಯಾಲೆನ್ಸ್ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಥಿತಿಯಾಗಿ ಅಗಮಿಸಿದ ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಕೋವಿಡ್ ವೇಳೆಯಲ್ಲಿ ಆಶಾ ಕಾರ್ಯಾಕರ್ತರು ಮಾಡಿರುವ ಕೆಲಸವನ್ನು ಗುರುತಿಸಿ ಗೌರವಿಸಿರುವುದು ಮತ್ತು ಆರೋಗ್ಯ ಇಲಾಖೆಗೆ ಭಟ್ಕಳ ಸರ್ಕಾರಿ ನೌಕರ ಸಂಘ ಸಲ್ಲಿಸಿದ ಸೇವೆಗೆ ತಾಲೂಕಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಮೋಹನ ನಾಯ್ಕರಿಗೆ ಅಭಿನಂದನೆ ಸಲ್ಲಿಸಿದರು
ಕಾರ್ಯಕ್ರಮದಲ್ಲಿ ಭಟ್ಕಳ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು
ನಂತರ ಸರಕಾರಿ ನೌಕರರ ಮಕ್ಕಳ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಗರಿಷ್ಠ ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಹಾಗೂ ನಿವೃತ್ತ ಸರ್ಕಾರಿ ನೌಕರರಿಗೆ ಹಾಗೂ ಸ್ನೇಹ ವಿಶೇಷ ಶಾಲೆ ಶಿಕ್ಷಕಿ ಮಾಲತಿ ಉದ್ಯಾವರ ಅವರಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಶರತ ಶೇಟಿ,ಉಪ ಖಜಾನೆ ಅಧಿಕಾರಿ ಪ್ರಕಾಶ ಎಸ್,ಹಳಪೆಟ್,ದೈಹಿಕ ಪರಿವೀಕ್ಷರು ರವೀಂದ್ರ ನಾಯ್ಕ,ಪ್ರೌಢಶಾಲಾ ಶಿಕ್ಷಕರ ಸಂಘದ ಮಂಜುನಾಥ ನಾಯ್ಕ,ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಉಲಾಸ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

error: