May 3, 2024

Bhavana Tv

Its Your Channel

ಪಾತ್ರಾಭಿನಯ ಸ್ಪರ್ಧೆಯಲ್ಲಿ ಕುಂಟವಾಣಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಭಟ್ಕಳ:- ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಕುಂಟವಾಣಿ ತಾ!! ಭಟ್ಕಳ ಇಲ್ಲಿಯ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .ಮೊಬೈಲ್ ಸುರಕ್ಷಿತ ಬಳಕೆಯ ಬಗ್ಗೆ ಹಿಂದಿ ಭಾಷೆಯಲ್ಲಿ ಮಕ್ಕಳ ಮನೋಜ್ಞ ಅಭಿನಯ ನಿರ್ಣಾಯಕರ ಮೆಚ್ಚುಗೆಗೆ ಪಾತ್ರವಾಯಿತು. ಶಿಕ್ಷಕ ಆನಂದ ನಾಯ್ಕ ರಚಿಸಿ ನಿರ್ದೇಶಿಸಿರುವ ಮಕ್ಕಳ ಈ ಸಾಧನೆಯನ್ನು ಶಾಲಾಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಶಾಲೆಯ ಮುಖ್ಯಾಧ್ಯಾಪಕರಾದ ವೀಣಾ ಸಭಾಹಿತ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

error: