May 17, 2024

Bhavana Tv

Its Your Channel

ವಿದ್ಯಾರ್ಥಿವೇತನ ಸ್ಥಗಿತಗೊಳಿಸುವುದರ ಮೂಲಕ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯ

ಭಟ್ಕಳ: ‘ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಪ್ ಯೋಜನೆ’ಹಾಗೂ’ಸಾಮಾಜಿಕನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ’ಯಡಿ ದೇಶದ ಲಕ್ಷಾಂತರ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದ ವಿದ್ಯಾರ್ಥಿ ವೇತನಗಳಿಗೆ ಕೇಂದ್ರ ಸರ್ಕಾರ ಕತ್ತರಿ ಪ್ರಯೋಗ ಮಾಡಿದ್ದು ಇದರಿಂದಾಗಿ ಲಕ್ಷಾಂತರ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆಲ್ ಇಂಡಿಯಾ ಐಡಿಯಲ್ ಟೀರ‍್ಸ್ ಅಸೋಸಿಯೇಶನ್ ಕರ್ನಾಟಕ ತೀವ್ರವಾಗಿ ಖಂಡಿಸಿದ್ದು ಇಂತಹ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಅದು ಆಗ್ರಹಿಸಿದೆ. ಅಲ್ಲದೆ 1ರಿಂದ8ನೇ ತರಗತಿ ವರೆಗೆ ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಐಟಾ ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ, ಕೇಂದ್ರ ಸರ್ಕಾರವು ಯಾವ ಮಾನದಂಡದ ಮೆರೆಗೆ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಪ್ರಶ್ನಿಸಿದ್ದು ಇದರಿಂದಾಗಿ ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆ ಮಾಡಿದಂತಾಗಿದೆ. 1ರಿಂದ 14 ವರ್ಷಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕಾಗಿದ್ದು ಅದರಲ್ಲಿ ವಿದ್ಯಾರ್ಥಿ ವೇತನವೂ ಸೇರಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಅಸಂಖ್ಯಾತ ವಿದ್ಯಾರ್ಥಿಗಳು ಶಾಲೆಯನ್ನು ತೊರೆಯಬಹುದು. ಇದು ಸರ್ವ ಶಿಕ್ಷ ಅಭಿಯಾನದ ಆಶಯಕ್ಕೆ ವಿರೋಧವಾಗಿದೆ. “ಸಂವಿಧಾನದ ಶಿಕ್ಷಣ ಹಕ್ಕನ್ನು ಸರ್ವ ರೀತಿಯಿಂದಲೂ ಅನುಷ್ಠಾನಕ್ಕೆ ತರಲು ಸಹಕಾರಿಯಾಗಿದ್ದ ಸ್ಕಾಲರ್ಶಿಪ್ ನಂತಹ ಉತ್ತೇಜನವನ್ನು ಸರ್ಕಾರ ಇನ್ನೂ ಮುಂದೆ ನಿಲ್ಲಿಸಿದರೆ, ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣದ ಹಕ್ಕನ್ನು ಸಾಧಿಸಲು ಸಾಧ್ಯವಾಗುವುದಿಲ್ಲ, ಕೇಂದ್ರದ ಇಂತಹ ನಡೆಯು ಶಿಕ್ಷಣದ ಹಕ್ಕನ್ನು ಸಂಕುಚಿತಗೊಳಿಸುವ ಮತ್ತು ಅದನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ವಿವಿಧ ಇಲಾಖೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾಗಲಿದ್ದಾರೆ ಮತ್ತು ಬಡ ಕುಟುಂಬದ ಹಿನ್ನೆಲೆಯುಳ್ಳ ವಿದ್ಯಾರ್ಥಿಗಳು ಸೌಲಭ್ಯ ವಂಚಿತರಾಗಲಿದ್ದಾರೆ, ಇದು ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ಮಕ್ಕಳನ್ನು ಶಾಲೆಯಿಂದ ಹೊರಗಿಡುವ ಪ್ರಯತ್ನವಾಗಿದೆ ಎಂದು ಮಾನ್ವಿ ಆರೋಪಿಸಿದ್ದು ಕೇಂದ್ರ ಸರ್ಕಾರ ಕೂಡಲೇ ಇಂತಹ ನಿರ್ಧಾರವನ್ನು ಹಿಂಪಡೆಯಬೇಕೆAದು ಮನವಿ ಮಾಡಿಕೊಂಡಿದ್ದಾರೆ.

error: