
ಭಟ್ಕಳ : 1995ರಲ್ಲಿ ಮುರುಡೇಶ್ವರದಲ್ಲಿ ನಡೆದಿದ್ದ ಹೊಡೆದಾಟ, ದೊಂಬಿ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು ಸುಮಾರು 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಮುರುಡೇಶ್ವರ ಪೊಲೀಸರು ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಮುರುಡೇಶ್ವರ ನ್ಯಾಶನಲ್ ಕಾಲೋನಿಯ ನಿವಾಸಿ ಮಹ್ಮದ್ ಸಾಧಿಕ್ ಅಹ್ಮದ್ ದಬಾಪು ಎಂದು ಗುರುತಿಸಲಾಗಿದೆ. ಈತ ಕೆಲವು ವರ್ಷಗಳ ಕಾಲ ತಲೆ ಮರೆಸಿಕೊಂಡು ಅರಬ್ ರಾಷ್ಟ್ರಗಳಲ್ಲಿ ನೆಲೆಸಿದ್ದ ಎನ್ನಲಾಗಿದೆ. ಈತ ಮುರುಡೇಶ್ವರಕ್ಕೆ ಬಂದಿದ್ದ ಕುರಿತು ಖಚಿತ ಮಾಹಿತಿಯನ್ನು ಪಡದ ವಾರೆಂಟ್ ಹವಾಲ್ದಾರ ನವೀನ್ ನಾಯಕ್, ಪೊಲೀಸ್ ಕಾನ್‌ಸ್ಟೇಬಲ್ ಲಕ್ಷ್ಮಣ ಪೂಜಾರಿ ಇವರುಗಳು ಮುರುಡೇಶ್ವರ ಎಸ್.ಐ. ಪರಮಾನಂದ ಕೊಣ್ಣೂರು ಅವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ