
ಭಟ್ಕಳ: ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆ ಭಟ್ಕಳದ ಆಸರಕೇರಿಯ ನಾಮಧಾರಿ ಸಭಾಭವನದಲ್ಲಿ ನಡೆಯಿತು.
ಮಂಡಲದ ಅಧ್ಯಕ್ಷರಾದ ಸುಬ್ರಾಯ ದೇವಾದಿಗ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕ ಮಾತನಾಡಿ
ಈ ದಿವಸ ಅಭಿಯಾನದ ಅಂಗವಾಗಿ ಕಾರ್ಯಕರ್ತರು ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.
ಭಟ್ಕಳ ಹೊನ್ನಾವರ ವಿಧಾನ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಅವರು ಕಾರ್ಯಕಾರಣಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ನಮ್ಮಲ್ಲಿ ಏನೇ ಸಣ್ಣಪುಟ್ಟ ಗೊಂದಲಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಂಡು, ಮುಂದಿನ ದಿನಗಳಲ್ಲಿ ನಾವೆಲ್ಲರೂ ಸೇರಿ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕೆಂದೆವೆ ಕಾರ್ಯಕರ್ತರಿಗೆ ಕರೆ ನೀಡಿದರು. ಮಂಡಲದ ಪ್ರಭಾರ ಪ್ರಶಾಂತ್ ನಾಯ್ಕ ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವಂತ ಮಾನವಿ ಮಾಡಿದರು.
ಮಂಡಲದ ಉಸ್ತುವಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ ಅವರು ಮಾತನಾಡಿ ವಿಜಯ ದಿವಸದ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಿದರು.
ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಗೋವಿಂದ ನಾಯ್ಕ ಅವರು ಮಾತನಾಡಿ ಎಲ್ಲಾ ಕಾರ್ಯಕರ್ತರು ತಮ್ಮ ಬೂತ್‌ಗಳ ಅವಲೋಕನ ಮಾಡಿಕೊಂಡು ಪಕ್ಷವನ್ನು ಸಂಘಟಿಸುವುದರ ಮೂಲಕ ಮುಂದಿನ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಕಾರ್ಯಕಾರಣಿ ಸಭೆಯ ವೇದಿಕೆಯಲ್ಲಿ ಹೊನ್ನಾವರ ಮಂಡಲದ ಪ್ರಭಾರಿ ಹಾಗೂ ಮಾಜಿ ಸೈನಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀಕಾಂತ್ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತರಾಮ್, ಹೊನ್ನಾವರ ಮಂಡಲದ ಅಧ್ಯಕ್ಷ ರಾಜೇಶ್ ಭಂಡಾರಿ, ಮಂಡಲದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ನಾಯ್ಕ, ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಸುರೇಶ್ ನಾಯ್ಕ, ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ರವಿ ನಾಯ್ಕ ಜಾಲಿ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು, ವಿವಿಧ ಮೋರ್ಚಾ ಹಾಗೂ ಪ್ರಕೋಷ್ಠಗಳ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಮೋಹನ್ ನಾಯ್ಕ ಸರ್ವರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಭಾಸ್ಕರ್ ದೈಮನೆ ಕಾರ್ಯಕ್ರಮ ನಿರೂಪಿಸಿದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ