May 14, 2024

Bhavana Tv

Its Your Channel

25 ವರ್ಷಗಳ ನಿಸ್ವಾರ್ಥ ಸೇವೆಗೆ ಪವಿತ್ರ ‘ಉಮ್ರಾ’ ಕೊಡುಗೆ ನೀಡಿದ ಹಳೆಯ ವಿದ್ಯಾರ್ಥಿಗಳು

ಭಟ್ಕಳ: ಕಳೆದ 25 ವರ್ಷಗಳಿಂದ ಶಮ್ಸ್ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತಕರು, ಸಾಮಾಜಿಕ ಕಾರ್ಯಕರ್ತರು ಆಗಿರುವಎಂ.ಆರ್.ಮಾನ್ವಿಯವರನ್ನು ಭಾನುವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅನಿವಾಸಿ ಉದ್ಯಮಿ ಅತಿಕರ‍್ರಹ್ಮಾನ್ ಮುನೀರಿ ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮೊದಲ ಬ್ಯಾಚ್ ಹಳೆಯ ವಿದ್ಯಾರ್ಥಿಗಳು ಅವರ ನಿಸ್ವಾರ್ಥ ಸೇವೆಗೆ ‘ಪವಿತ್ರಉಮ್ರಾ’ ಪ್ಯಾಕೇಜ್ ಕೊಡುಗೆಯಾಗಿ ನೀಡಿದ್ದಾರೆ.
ತರಬಿಯತ್ ಎಜ್ಯುಕೇಶನ್ ಸೊಸೈಟಿಯ ಶಮ್ಸ್ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 1997ರಲ್ಲಿ ಶಿಕ್ಷಕರಾಗಿ ಸೇವೆಗೆ ಸೇರಿದ ಎಂ.ಆರ್.ಮಾನ್ವಿ ನಂತರ ಮುಖ್ಯಾಧ್ಯಾಪಕರಾಗಿ 25 ವರ್ಷಗಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿದ್ಯಾರ್ಥಿಗಳೇ ಶಿಕ್ಷಕರಿಗೆ ಆಸ್ತಿಯಾಗಿದ್ದು ಪ್ರತಿಯೊಂದು ಹಂತದಲ್ಲೂ ಶಿಕ್ಷಕ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಬದುಕಬೇಕು. ಪವಿತ್ರ ಉಮ್ರಾದ ಕೊಡುಗೆ ನೀಡಿರುವ ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿಅವರುಕೃತಜ್ಞತೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ಮೊಹತೆಶಮ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್, ಮೌಲಾನ ಸೈಯ್ಯದ್‌ಝಬೇರ್, ಮೌಲಾನ ಅಝೀಝರ‍್ರಹ್ಮಾನ್ ರುಕ್ನುದ್ದೀನ್ ನದ್ವಿ, ಪ್ರಾಂಶುಪಾಲ ಲಿಯಾಖತ್ ಅಲಿ ಮುಂತಾದವರು ಉಪಸ್ಥಿತರಿದ್ದರು.

error: