March 22, 2025

Bhavana Tv

Its Your Channel

ಕಾಂಗ್ರೆಸ್ ಪಕ್ಷದ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಜೆ.ಡಿ. ನಾಯ್ಕ

ಭಟ್ಕಳ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಜೆ.ಡಿ. ನಾಯ್ಕ ಅವರನ್ನು ಕಾಂಗ್ರೆಸ್ ಪಕ್ಷದ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಡಾ. ಎಂ. ಬಿ. ಪಾಟೀಲ್ ಆದೇಶ ನೀಡಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಆದೇಶದ ಮೇರೆಗೆ ಮಾಜಿ ಶಾಸಕ ಜೆ.ಡಿ. ನಾಯ್ಕ ಅವರನ್ನು ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸ್ಥಳೀಯ ಪ್ರಮುಖರ ಸಹಕಾರದೊಂದಿಗೆ ಪಕ್ಷದ ಸಬಲೀಕರಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪಕ್ಷದ ಸಂಘಟನೆಗಾಗಿ ಶ್ರಮಿಸಬೇಕು ಹಾಗೂ 2023ರ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚಿನ ಯಶಸ್ಸು ಸಿಗುಂತಾಗಲಿ ಎಂದು ತಮ್ಮ ಆದೇಶ ಪತ್ರದಲ್ಲಿ ಆಶಿಸಿದ್ದಾರೆ.

error: