April 28, 2024

Bhavana Tv

Its Your Channel

ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ಭಟ್ಕಳ ಘಟಕದ ವತಿಯಿಂದ ಪುರಸಭಾ ಅಧ್ಯಕ್ಷರಿಗೆ ಮನವಿ

ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಮಾಡುವ ನೌಕರರು, ವಾಹನ ಚಾಲಕರು, ಯುಜಿಡಿ ನೌಕರರು, ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಪದ್ಧತಿ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ಭಟ್ಕಳ ಘಟಕದ ವತಿಯಿಂದ ಪುರಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಮಾಡುವ ನೌಕರರು, ವಾಹನ ಚಾಲಕರು, ಯುಜಿಡಿ ನೌಕರರು, ಡಾಟಾ ಎಂಟ್ರಿ ಆಪರೇಟರ್‌ಗಳು ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದು ಸಾಮಾಜಿಕ ಭದ್ರತೆ ಇಲ್ಲದಂತಾಗಿದೆ. ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರೊಂದಿಗೆ ಪೂರಕವಾಗಿ ದುಡಿಯುವ ಹೊರಗುತ್ತಿಗೆ ನೌಕರರನ್ನು ರಾಜ್ಯ ಸರ್ಕಾರವು ಕಡೆಗಣಿಸಿದ್ದು, ಪ್ರತಿದಿನವೂ ಸಾರ್ವಜನಿಕರಿಗೆ ಅತ್ಯಗತ್ಯ ಸೇವೆಗಳನ್ನು ಒದಗಿಸುವಲ್ಲಿ ನಿರತರಾಗಿರುವ ಎಲ್ಲಾ ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಪದ್ಧತಿಯಿಂದ ವಿಮುಕ್ತಿಗೊಳಿಸಿ ಈ ಹೊರಗುತ್ತಿಗೆ ನೌಕರರಿಗೆ ಸಕಾಲಕ್ಕೆ ವೇತನ, ಪಿ.ಎಫ್. ಇಎಸ್‌ಐ ಸರಿಯಾದ ಸಮಯಕ್ಕೆ ಸಿಗಲು ಕ್ರಮ ಕೈಗೊಳ್ಳುವುದು. ನಗರದ ಸ್ವಚ್ಛತೆ ಯಂತಹ ಪ್ರಮುಖ ಜವಾಬ್ದಾರಿ ಕುಡಿಯುವ ನೀರು ಸರಬರಾಜು ಮಾಡುವ ಈ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡುವ ದೃಷ್ಟಿಯಿಂದ ಪೌರಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಜಾರಿಗೊಳಿಸಲು ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಲು ಕ್ರಮ ಕೈಗೊಳಬೇಕೆಂದು ಕೋರಲಾಗಿದೆ.
ಭಟ್ಕಳ ಪುರಸಭೆಯ ಹೊರಗುತ್ತಿಗೆ ನೌಕರರು ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರ ಸಂಘದ ತಾಲೂಕು ಅಧ್ಯಕ್ಷ ಶ್ರೀಧರ್ ನಾಯ್ಕ, ಕಾರ್ಯದರ್ಶಿ ರಮೇಶ್ ಎಸ್.ಕೆ., ಚೇತನ್ ನಾಯ್ಕ, ವಾಸು ನಾಯ್ಕ, ಮಂಜು ನಾಯ್ಕ, ಗಣೇಶ್ ಹಾಗೂ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು…

error: