December 21, 2024

Bhavana Tv

Its Your Channel

ಕನ್ನಡ ಎಂ.ಎ. ಫಲಿತಾಂಶ ಪ್ರಕಟ : ಅಂಜುಮನ್ ಕಾಲೇಜು ನೂರಕ್ಕೆ ನೂರು ತೇರ್ಗಡೆ!

ಭಟ್ಕಳ : ಕರ್ನಾಟಕ ವಿಶ್ವವಿದ್ಯಾಲಯವು 2021-22ನೇ ಸಾಲಿನಲ್ಲಿ ನಡೆಸಿದ ಕನ್ನಡ ಎಂ.ಎ. ಎರಡನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಸ್ನಾತಕೋತ್ತರ ಕೇಂದ್ರದ ಫಲಿತಾಂಶ ಪ್ರತಿಶತ 100 ಆಗಿರುತ್ತದೆ. ಎಂ.ಎ. ಕನ್ನಡ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯೊಂದಿಗೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಮೊದಲ ಸೆಮಿಸ್ಟರ್ ಪರೀಕ್ಷೆಯಲ್ಲಿಯೂ ಈ ವಿದ್ಯಾರ್ಥಿಗಳು ಇಂತಹದ್ದೇ ಸಾಧನೆ ಮಾಡಿರುವುದನ್ನು ನೆನೆಯಬಹುದು. ಕುಮಾರಿ ಮಾಯಾ ನಾಯ್ಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದರೆ, ಕುಮಾರಿ ಸುಚಿತ್ರಾ ನಾಯ್ಕ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಉಳಿದ ವಿದ್ಯಾರ್ಥಿಗಳೂ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿರುವುದು ಒಂದು ಅಪೂರ್ವ ಸಾಧನೆಯೇ ಸರಿ. ಕುಮಾರಿ ಚಂದ್ರಿಕಾ ಕಂಚುಗಾರ್ ಮತ್ತು ಕುಮಾರಿ ಹೀನಾ ಕೌಸರ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದಿರುತ್ತಾರೆ. ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳನ್ನು ಅಂಜುಮನ್ ಸಂಸ್ಥೆಯ ಆಡಳಿತ ಮಂಡಳಿಯವರು, ಕಾಲೇಜಿನ ಪ್ರಾಂಶುಪಾಲ ಪ್ರೊ. ಮುಸ್ತಾಕ್ ಕೆ. ಶೇಖ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಆರ್. ಎಸ್. ನಾಯಕ ಹಾಗೂ ವಿಭಾಗದ ಪ್ರಾಧ್ಯಾಪಕರು, ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

error: