December 6, 2024

Bhavana Tv

Its Your Channel

ಸಿಸೋಡಿಯಾ ಬಂಧನ: ಎಎಪಿ ಖಂಡನೆ

ಭಟ್ಕಳ: ದೆಹಲಿಯ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಿರುವುದನ್ನು ಆಮ್ ಆದ್ಮಿ ಪಾರ್ಟಿ (ಎಎಪಿ) ಮುಖಂಡರು ಡಾ ನಸೀಮ್ ಅಹ್ಮದ್ ಖಾನ್ ಖಂಡಿಸಿದರು.

ದೇಶದಾದ್ಯAತ ಆಮ್ ಆದ್ಮಿ ಪಕ್ಷ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಕೇಂದ್ರ ಬಿಜೆಪಿ ಸರ್ಕಾರ ಸಿಸೋಡಿಯಾ ಅವರನ್ನು ಬಂಧಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ನೂತನ ಅಬಕಾರಿ ನೀತಿಯನ್ನು ದೆಹಲಿಯಲ್ಲಿ ಇನ್ನೂ ಜಾರಿಗೆ ತಂದಿಲ್ಲ ಹಾಗೂ ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ.

ಕೇಂದ್ರ ಸರ್ಕಾರ ಸುಮಾರು ಒಂದು ವರ್ಷದಿಂದ ತನಿಖಾಧಿಕಾರಿಗಳಿಂದ ಸಿಸೋಡಿಯಾ ಅವರ ಮೇಲೆ ದಾಳಿ ನಡೆಸಿದರೂ ಅಕ್ರಮ ಹಣ ವರ್ಗಾವಣೆಗೆ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್ ಆದ್ಮಿ ಪಕ್ಷ ಬಿಜೆಪಿಯನ್ನು ಎದುರಿಸುವ ಏಕೈಕ ಶಕ್ತಿ ಎಂಬುದನ್ನು ಅರಿತು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕಿರು ಕುಳ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವರಾಗಿ ಮನೀಷ್ ಸಿಸೋಡಿ ಅವರು ಬರೋಬ್ಬರಿ 25 ಸಾವಿರ ಶಾಲಾ ಕೊಠಡಿ ನಿರ್ಮಿಸಿ, ಸುಮಾರು 20 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಇಂತಹವರ ವಿರುದ್ಧ ಬಿಜೆಪಿಯು ಈ ರೀತಿ ಕೀಳುಮಟ್ಟದ ಕುತಂತ್ರ ಮಾಡು ತ್ತಿರುವುದು ಖಂಡನೀಯ ಎಂದರು.

error: