May 19, 2024

Bhavana Tv

Its Your Channel

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ

ಭಟ್ಕಳ: ಪ್ರಸಕ್ತವಾಗಿ ಮನೆಗೆ ಸೀಮಿತವಾಗಿರದೇ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದನ್ನು ಕಾಣಬಹುದಾಗಿದೆ. ಮಹಿಳಾ ಸಬಲೀಕರಣಕ್ಕೆ ಸರಕಾರ ಹೆಚ್ಚಿನ ಒತ್ತು ನೀಡುತ್ತ ಬಂದಿದೆ ಶಾಸಕ ಸುನೀಲ ನಾಯ್ಕ ಹೇಳಿದರು.

ಅವರು ಸುವರ್ಣ ಸ್ತ್ರೀ ಒಕ್ಕೂಟ ಭಟ್ಕಳ, ಸಂಜೀವಿನಿ ಒಕ್ಕೂಟ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಆಸರಕೇರಿ ನಿಚ್ಚಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸ್ವಾವಲಂಬಿಗಳಾಗಬೇಕು. ಆತ್ಮವಿಶ್ವಾಸದಿಂದ ಯಶಸ್ಸು ಲಭಿಸುತ್ತದೆ. ಕ್ರೀಡಾ ಕ್ಷೇತ್ರದಲ್ಲಿಯೂ ಮಹಿಳೆಯರು ಸಾಧನೆಗೈಯುತ್ತಿದ್ದಾರೆ. ಸರಕಾರದ ವಿವಿಧ ಇಲಾಖೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ. ಭಟ್ಕಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ವಿವಿಧ ಇಲಾಖೆಗಳನ್ನು ನಿರ್ವಹಿಸುತ್ತಿದ್ದಾರೆ. ಇದರಿಂದ ಸರಕಾರಿ ಕೆಲಸದಲ್ಲಿ ಬದ್ಧತೆ ಹೆಚ್ಚಾಗಿರುವುದನ್ನು ಕಾಣಬಹುದಾಗಿದೆ. ಇಂಗ್ಲೆAಡ್, ಅಮೇರಿಕಾ, ಜಪಾನ್‌ನಂತಹ ರಾಷ್ಟ್ರಗಳಲ್ಲಿ ಮಹಿಳೆಯರು ಸ್ವಂತ
ಉದ್ದಿಮೆ ಸ್ಥಾಪಿಸಿ ಪ್ರಸಿದ್ಧಿ ಪಡೆಯುತ್ತಿದ್ದಾರೆ. ಭಾರತದಲ್ಲಿ ಮಹಿಳಾ ಉದ್ದಿಮೆದಾರರ ಸಂಖ್ಯೆ ಕಡಿಮೆ ಇದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯುವಂತಾಗಬೇಕು ಎಂದರು. ನ್ಯಾಯವಾದಿ ಧನ್ಯಕುಮಾರ ಜೈನ್ ಉಪನ್ಯಾಸ ನೀಡಿದರು. ಭಟ್ಕಳ ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್, ಭಟ್ಕಳ ಶಿಶು ಹಾಗೂ ಮಹಿಳಾ ಅಭಿವೃದ್ಧಿ ಯೋಜನಾ ಅಧಿಕಾರಿ ಸುಶೀಲಾ ಮೊಗೇರ, ಎಚ್ಚಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಮಾತನಾಡಿದರು. ಭಟ್ಕಳ ಸ್ನೇಹ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿ ಮಾಲತಿ ಉದ್ಯಾವರ, ಜಿಪಂ ಮಾಜಿ ಸದಸ್ಯೆಯರಾದ ಸುಭದ್ರಾ ದೇವಡಿಗ, ಸವಿತಾ ಗೊಂಡ, ಕಾವೇರಿ ದೇವಡಿಗ, ಗೋಪಾಲ ನಾಯ್ಕ, ವೆಂಕಟೇಶ ದೇವಡಿಗ ಮತ್ತಿತರರು ಉಪಸ್ಥಿತರಿದ್ದರು. ಸಂಜೀವಿನಿ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಸುನೀತಾ ಹೆರೂಕರ್ ಸ್ವಾಗತಿಸಿದರು. ಶಿಕ್ಷಕರಾದ ಸುರೇಶ ಹಾಗೂ ಜಯಶ್ರೀ ಆಚಾರಿ ಕಾರ್ಯಕ್ರಮ ನಿರೂಪಿಸಿದರು.

error: