April 23, 2024

Bhavana Tv

Its Your Channel

ಮುಸ್ಲಿಮ್ ಅಭ್ಯರ್ಥಿ ಬೆಂಬಲಕ್ಕೆ ನಿಲ್ಲಲು ತಂಜೀಮ್ ಹಿಂದೇಟು?

ಭಟ್ಕಳ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಲವೇ ದಿನಗಳಲ್ಲಿ ಎದುರಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬoಧಿಸಿದoತೆ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಮ್ ಸಮುದಾಯದ ಅಭ್ಯರ್ಥಿಯ ಬೆಂಬಲಕ್ಕೆ ನಿಲ್ಲಲು ಇಲ್ಲಿನ ಮುಸ್ಲಿಮ್ ಪ್ರಾತಿನಿಧಿಕ ಸಂಸ್ಥೆ ಮಜ್ಜಿಸೇ ಇಸ್ಲಾ ವ ತಂಜೀಮ್ ಹಿಂದೇಟು ಹಾಕಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.
ಸೋಮವಾರ ಈ ಬಗ್ಗೆ ಭಟ್ಕಳ ಹಾಗೂ ಹೊನ್ನಾವರ ತಾಲೂಕಿನ ಮುಸ್ಲಿಮ್ ಸಮುದಾಯದ ಮುಖಂಡರು ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಸಭೆಯಲ್ಲಿ ಭಾಗವಹಿಸಿದ್ದ ಅಧಿಕ ಮಂದಿ ತಂಜೀಮ್ ಬೆಂಬಲದೊoದಿಗೆ ಮುಸ್ಲಿಮ್ ಅಭ್ಯರ್ಥಿ ಕಣಕ್ಕೆ ಇಳಿಯುವ ಬಗ್ಗೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ. ಭಟ್ಕಳ ಹಾಗೂ ಹೊನ್ನಾವರ ತಾಲೂಕಿನ 45ಕ್ಕೂ ಹೆಚ್ಚಿನ ಮುಸ್ಲಿಮ್ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, 20ರಷ್ಟು ಮಂದಿ ಮುಸ್ಲಿಮ್ ಅಭ್ಯರ್ಥಿಗೆ ಬೆಂಬಲ ಘೋಷಿಸುವ ಬಗ್ಗೆ ಒಪ್ಪಿಗೆ ಸೂಚಿಸಿದರೆ, 25ಕ್ಕೂ ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಸ್ಲಿಮ್ ಅಭ್ಯರ್ಥಿ ಕಣಕ್ಕೆ ಇಳಿದರೆ ಮುಂದಿನ ಚುನಾವಣೆಯಲ್ಲಿ ಗೆಲುವಿನ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಹೆಚ್ಚಿನವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಬೆಳವಣಿಗೆ ಜೆಡಿಎಸ್ ಟಿಕೇಟ್ ಪಡೆದು ತಂಜೀಮ್ ಬೆಂಬಲದೊoದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನ ನಡೆಸಿದ್ದ ಇನಾಯಿತುಲ್ಲಾ ಶಾಬಂದ್ರಿಯವರಿಗೆ ನಿರಾಸೆ ಮೂಡಿಸಿದರೆ, ಮತ ವಿಭಜನೆ ಚುನಾವಣೆಯಲ್ಲಿ ದೊಡ್ಡ ಹೊಡೆತವನ್ನು ನೀಡುವ ಆತಂಕದಲ್ಲಿದ್ದ ಕಾಂಗ್ರೆಸ್ ಪಕ್ಷ ನಿಟ್ಟುಸಿರು ಬಿಡುವಂತೆ ಮಾಡಿದೆ. ಆದರೆ ಇಲ್ಲಿಯವರೆಗೂ ತಂಜೀಮ್ ಮುಖಂಡರು ಯಾವುದೇ ಪಕ್ಷಕ್ಕೆ ಬೆಂಬಲ ಘೋಷಿಸದೇ ಇರುವುದು ರಾಜಕೀಯ ವಲಯದಲ್ಲಿ ಕುತೂಹಲವನ್ನು ಉಳಿದುಕೊಳ್ಳುವಂತೆ ಮಾಡಿದೆ.

error: