April 28, 2024

Bhavana Tv

Its Your Channel

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ:ಭಟ್ಕಳಕ್ಕೆ ಮಾಜಿ ಶಾಸಕ ಮಂಕಾಳ ವೈದ್ಯ ಘೋಷಣೆ

ಭಟ್ಕಳ: ವಿಧಾನಸಭಾ ಚುನಾವಣೆಗೆ 124 ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿ ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಪ್ರಕಟಣೆ ಹೊರಡಿಸಿದೆ. ಈ ಪೈಕಿ ಉತ್ತರ ಕನ್ನಡದ ಮೂವರು ಮಾಜಿ ಶಾಸಕರುಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಭಟ್ಕಳಕ್ಕೆ ಮಾಜಿ ಶಾಸಕ ಮಂಕಾಳ ವೈದ್ಯ ಅವರನ್ನು ಅಂತಿಮಗೊಳಿಸಲಾಗಿದೆ. ವೈದ್ಯ ಅವರು 2018ರ ಚುನಾವಣೆಯಲ್ಲಿ ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ವಿರುದ್ಧ ಕಾಂಗ್ರೆಸ್‌ನಿAದ ಸ್ಪರ್ಧಿಸಿ 5,930 (77,242) ಮತಗಳ ಅಂತರದಿAದ ಸೋಲನನುಭವಿಸಿದ್ದರು. ಅದಕ್ಕೂ ಪೂರ್ವ, 2013ರಲ್ಲಿ ಅವರು ಪಕ್ಷೇತರರಾಗಿ ಕಣಕ್ಕಿಳಿದು 37,319 ಮತಗಳನ್ನ ಪಡೆದು ಗೆಲುವು ಕಂಡಿದ್ದರು.
ಇನ್ನು ಕಾರವಾರಕ್ಕೆ ಮಾಜಿ ಶಾಸಕ ಸತೀಶ್ ಸೈಲ್ ಅವರನ್ನು ಘೋಷಿಸಲಾಗಿದೆ. ಸೈಲ್ ಕೂಡ 2013ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆದರೆ 2018ರ ಚುನಾವಣೆಯಲ್ಲಿ ಹಾಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ವಿರುದ್ಧ 15,268 (45,071) ಮತಗಳ ಅಂತರದಿAದ ಮೂರನೇ ಸ್ಥಾನಕ್ಕೆ ಕುಸಿದಿದ್ದರು.
ಹಳಿಯಾಳದಿಂದ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಟಿಕೆಟ್ ನೀಡಲಾಗಿದ್ದು, ಇದು ಅವರ 10ನೇ ಚುನಾವಣೆಯಾಗಿದೆ. 9 ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಎಂಟು ಬಾರಿ ಕ್ಷೇತ್ರದ ಶಾಸಕರಾಗಿರುವ ಅವರು, ಈ ಬಾರಿ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ.
ಇನ್ನು ಶಿರಸಿ, ಯಲ್ಲಾಪುರ ಹಾಗೂ ಕುಮಟಾ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಬಾಕಿ ಇದ್ದು, ಎರಡನೇ ಪಟ್ಟಿಯಲ್ಲಿ ಪ್ರಕಟಿಸಲಾಗುತ್ತದೆ ಎನ್ನಲಾಗಿದೆ.

error: