
ಭಟ್ಕಳ : ಭಟ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಕ್ಷೇತ್ರಶಿಕ್ಷಣಾಧಿಕಾರಿಗಳು ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರೂ ಹೌದು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ತೆರೆದ ಮನಸಿನ ಸಹಕಾರವನ್ನು ದೇವಿದಾಸ ಮೊಗೇರ ಅವರು ತಮ್ಮ ಸೇವಾ ಅವಧಿಯಲ್ಲಿ ನೀಡಿದ್ದಾರೆ. ಮಾತ್ರವಲ್ಲ ಸಾಹಿತ್ಯ ಸಮ್ಮೇಳನ ಸಂಘಟಿಸುವಲ್ಲಿಯೂ ಸಲಹೆ ಸೂಚನೆಯನ್ನಿತ್ತು ಮಾರ್ಗದರ್ಶನ ನೀಡಿದ್ದಾರೆ. ನನ್ನ ವಿದ್ಯಾಗುರುಗಳೂ ಆಗಿರುವ ದೇವಿದಾಸ ಮೊಗೇರ ಸರ್ ಅವರ ನಿವೃತ್ತ ಜೀವನ ಸದಾ ಸುಖಕರವಾಗಿರಲಿ ಎಂದು ಹಾರೈಸಿದರಲ್ಲದೇ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳ ಸಂಘಟನೆಯಲ್ಲಿ ಅವರ ಮಾರ್ಗದರ್ಶನ ಸದಾ ಇರಲಿ ಎಂದರು. ಈ ಸಂದರ್ಭದಲ್ಲಿ ಕಸಾಪ ಗೌರವ ಕೊಶಾಧ್ಯಕ್ಷ ಶ್ರೀಧರ ಶೇಟ್, ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ, ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.



More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ