April 24, 2024

Bhavana Tv

Its Your Channel

ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ : ಡಾ. ಆರ್.ವಿ.ಸರಾಫ್.

ಭಟ್ಕಳ ; ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ ಎಂದು ಸಾಹಿತಿ ಡಾ. ಆರ್.ವಿ.ಸರಾಫ್ ನುಡಿದರು. ಅವರು ಇಲ್ಲಿನ ಶಿರಾಲಿಯಲ್ಲಿ ಭಟ್ಕಳ ತಾಲೂಕು ಕಸಾಪ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕನ್ನಡ ನಾಡು, ನುಡಿಯ ಸರ್ವಾಮಗೀಣ ಪ್ರಗತಿಯ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯ ಯೋಜನೆಗಳಿವೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸುವ ಮೂಲಕ ಕನ್ನಡದ ಅಸ್ಮಿತೆಯನ್ನು ಕಾಪಾಡುವ ಕಾರ್ಯವನ್ನು ಮಾಡಿರುವುದು ಸ್ಮರಣೀಯ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ಶಿಕ್ಷಣ, ನೀರಾವರಿ. ಸಾಮಾಜಿಕ ಕ್ಷೇತ್ರ, ಕೈಗಾರಿಕೆ, ವೈದ್ಯಕೀಯ, ವಿದ್ಯುತ್ ಉತ್ಪಾದನೆ, ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಜಾರಿಗೆ ತಂದು ಜನಪರ ಆಡಳಿತದ ಮೂಲಕ ಇಡೀ ದೇಶವೇ ಕನ್ನಡ ನಾಡಿನೆಡೆ ತಿರುಗಿ ನೋಡುವಂತೆ ಮಾಡಿದರು. ಸ್ವಾತಂತ್ರö್ಯ ಪೂರ್ವದಲ್ಲೇ ಪ್ರಜಾ ಪ್ರತಿನಿಧಿ ಸಭೆಗೆ ಮಾನ್ಯತೆ ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದೇಶದಲ್ಲಿಯೇ ಮೊದಲು ಅನುಷ್ಠಾನಕ್ಕೆ ತಂದ ಹೆಗ್ಗಳಿಕೆ ಅವರದ್ದಾಗಿದೆ. ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಕನ್ನಡ ನಾಡು ನುಡಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಕಸಾಪ ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ ವಂದಿಸಿದರು. ಆರಂಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ, ಶಂಕರ ನಾಯ್ಕ ಉಪಸ್ಥಿತರಿದ್ದರು.

error: