May 4, 2024

Bhavana Tv

Its Your Channel

ಸಚಿವ ಮಂಕಾಳ ವೈದ್ಯರ ಅಭಿನಂದನಾ ಬ್ಯಾನರ್ ಕಿತ್ತೆಸೆದ ಕಿಡಿಗೇಡಿಗಳು .

ಭಟ್ಕಳ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಮಂಕಾಳ ವೈದ್ಯರ ಅಭಿನಂದನಾ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಕಿತ್ತೆಸೆದ ಘಟನೆ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.

ಮಂಕಾಳ ವೈದ್ಯ ಅವರನ್ನು ಅಭಿನಂದಿಸಿ ಅವರ ಅಭಿಮಾನಿಗಳು ತಾಲೂಕಿನ ವಿವಿಧಡೆ ಬ್ಯಾನರ್ ಅಳವಡಿಸಿದ್ದಾರೆ. ಈ ಪೈಕಿ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಬ್ಯಾನರ್ ಅನ್ನು ಜೂ.೧೮ರಂದು ಯಾರೂ ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಗೆ ಬೆಳಕೆ ನಿವಾಸಿ ನಾರಾಯಣ ನಾಯ್ಕ ಎಂಬವರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: