
ಭಟ್ಕಳ: ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಭಟ್ಕಳ ತಾಲೂಕಾ ನಾರಾಯಣ ಗುರು ಜಯಂತಿ ಆಚರಣಾ ಸಮಿತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಾಮಾಜಿಕ ಪರಿವರ್ತನೆಯಲ್ಲಿ ನಾರಾಯಣ ಗುರುಗಳ ಪಾತ್ರ ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯು ಭಟ್ಕಳ ಸೊನಾರಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಸೊನಾರಕೇರಿಯ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಯಲ್ಲಮ್ಮರವರು ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಭಾಷಣ ಸ್ಪರ್ಧೆಯಲ್ಲಿ ಮೋನಿಕಾ ಜಯಕರ ನಾಯ್ಕ, ಶ್ರೀವಲಿ ಪ್ರೌಢಶಾಲೆ ಪ್ರಥಮ, ಆಶಿಕಾ ಮಂಜುನಾಥ ನಾಯ್ಕ, ಶ್ರೀನಾರಾಯಣ ಗುರು ವಸತಿ ಶಾಲೆ ಭಟ್ಕಳ ದ್ವಿತೀಯ,
ಅಭಿಧಿ ಪ್ರಕಾಶ ಕಾಯ್ಕಿಣಿ ತೃತೀಯ( ವಿದ್ಯಾಭಾರತಿ ಪ್ರೌಢ ಶಾಲೆ) ಹಾಗೂ ವೈಷ್ಣವಿ ವಸಂತ ನಾಯ್ಕ (ಸೋನಾರಕೇರಿ ಪ್ರೌಢ ಶಾಲೆ) ಸಮಾಧಾನಕರ ಬಹುಮಾನ ಪಡೆದರು. ವಿಜೇತರಿಗೆ ಸೆಪ್ಟಂಬರ ೧೦ ರಂದು ಆಸರಕೇರಿಯ ವೆಂಕಟರಮಣ ಸಭಾಭವನದಲ್ಲಿ ನಡೆಯುವ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು ಎಂದು ಕಾರ್ಯಕ್ರಮದ ಸಂಚಾಲಕ ಮನಮೋಹನ ನಾಯ್ಕ ತಿಳಿಸಿದರು. ಕಸಾಪ ಅಧ್ಯಕ್ಷ ಗಂಗಾಧರ ನಾಯ್ಕ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಪಾಂಡುರAಗ ನಾಯ್ಕ, ಶಿಕ್ಷಕ ನಾರಾಯಣ ನಾಯ್ಕ, ನಿರ್ಣಾಯಕರಾದ ಶಿಕ್ಷಕ ಸುರೇಶ ಮುರ್ಡೇಶ್ವರ, ಗೋಪಾಲ ನಾಯ್ಕ, ರವಿ ನಾಯ್ಕ, ಸೋನಾರಕೇರಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ