May 3, 2024

Bhavana Tv

Its Your Channel

ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರ

ಭಟ್ಕಳ ; ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದಿಂದ ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರ

ವಿದ್ಯಾರ್ಥಿಗಳ ವೇದಿಕೆ ಟೆಕ್ನೋವೇಟ್‌ನ ಸಹಯೋಗದೊಂದಿಗೆ 15 ಏಪ್ರಿಲ್ 2024 ರಂದು ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರವನ್ನು ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದಿಂದ ಆಯೋಜಿಸಿತು. ಕಾಲೇಜಿನ ಹಳೆಯ ವಿದ್ಯಾರ್ಥಿ ಆಕಿಫ್ ಅಶರ್ ಖಾನ್ ಕಾರ್ಯಾಗಾರವನ್ನು ಮುನ್ನಡೆಸಿದರು.

ಕಾರ್ಯಾಗಾರವು ಆಧುನಿಕ ಸಾಫ್ಟ್ವೇರ್ ಅಭಿವೃದ್ಧಿಗೆ ಅಗತ್ಯವಾದ ಗಿಟ್ ಮತ್ತು ಗಿಟ್ ಹಬ್ ಕುರಿತು ಸಮಗ್ರ ತಿಳುವಳಿಕೆಯನ್ನು ನೀಡಿತು. ಕಾರ್ಯಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಗಿ???ನ್ನು ಬಳಸಿಕೊಂಡು ಕೋಡ್‌ನಲ್ಲಿ ಬದಲಾವಣೆಗಳನ್ನು ಹೇಗೆ ಟ್ರ‍್ಯಾಕ್ ಮಾಡುವುದು, ಗಿಟ್ ಹಬ್ ನಲ್ಲಿ ತಂಡದ ಸದಸ್ಯರೊಂದಿಗೆ ಪರಿಣಾಮಕಾರಿಯಾಗಿ ಸಹಕರಿಸುವುದು ಮತ್ತು ಆವೃತ್ತಿ ನಿಯಂತ್ರಣವನ್ನು ಹೇಗೆ ನಿರ್ವಹಿಸುವುದು ಎಂದು ಕಲಿತರು. ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡಿತು.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ಪ್ರೊ. ಕಿರಣ ಶಾನಭಾಗ ಅವರು ಆಕಿಫ್ ಅಶರ್ ಖಾನ್ ಅವರ ಅಮೂಲ್ಯ ಕೊಡುಗೆಗಾಗಿ ಹೃತ್ಪೂರ್ವಕವಾಗಿ ಅಭಿನಂದಿಸಿದರು. ಪ್ರಾಂಶುಪಾಲ ಡಾ. ಫಜಲುರ್ ರೆಹಮಾನ್ ಹಾಗೂ ರೆಜಿಸ್ಟ್ರಾರ್ ಪ್ರೊ. ಜಾಹಿದ್ ಖರೂರಿ ಸಂಸ್ಥೆಯ ಬೆಳವಣಿಗೆಗೆ ಹಳೆಯ ವಿದ್ಯಾರ್ಥಿಗಳ ನಿರಂತರ ಬೆಂಬಲ ಮತ್ತು ಕೊಡುಗೆಗಳನ್ನು ಸ್ಮರಿಸಿದರು. ಪ್ಲೇಸ್ಮೆಂಟ್ ಆಫೀಸರ ಪ್ರೊ. ಶ್ರೀಶೈಲ ಭಟ್ಟ ವಿದ್ಯಾರ್ಥಿಗಳ ಸಾಮರ್ಥ್ಯಗಳ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಹಳೆಯ ವಿದ್ಯಾರ್ಥಿಗಳ ಸಹಕಾರವನ್ನು ಅಪೇಕ್ಷಿಸಿದರು.

error: