May 20, 2024

Bhavana Tv

Its Your Channel

ಜಾಲಿ ಸರಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ

ಭಟ್ಕಳ: ತಾಲೂಕಿನ ಜಾಲಿ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 32 ವಿದ್ಯಾರ್ಥಿಗಳು ಕುಳಿತುಕೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲಾ ಫಲಿತಾಂಶ ಶೇಕಡ 100% ಆಗಿದೆ.32 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಸೇವಂತಿ ಈರಯ್ಯ ಗೊಂಡ (595/95%) ಶಾಲೆಗೆ ಪ್ರಥಮ,ಶಿವಾನಂದ ಲೋಕೇಶ ಮೊಗೇರ್ (575/ 92%)ದ್ವಿತೀಯ ಮತ್ತು ಸಹನಾ ರಾಜು ನಾಯ್ಕ (567/90.72 % ) ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ. ಜಾಲಿ ಪ್ರೌಢಶಾಲೆ ಪ್ರಾರಂಭವಾದAದಿನಿAದ ಇದುವರೆಗಿನ 14 ಎಸ್ ಎಸ್ ಎಲ್ ಸಿ ಬ್ಯಾಚ್ ಗಳಲ್ಲಿ 9 ಸಲ 100ಕ್ಕೆ 100 ರಷ್ಟು ಸಾಧನೆ ಮಾಡಲಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕ ವೃಂದದವರು, ಶಾಲಾ ಎಸ್. ಡಿ. ಎಂ.ಸಿಯ ಅಧ್ಯಕ್ಷರು ಮತ್ತು ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಊರನಾಗರಿಕರು ಮತ್ತು ಸಂಘ ಸಂಸ್ಥೆಗಳ ಮುಖಂಡರು ಅಭಿನಂದನೆಗಳನ್ನು ತಿಳಿಸಿದ್ದಾರೆ.

error: