May 20, 2024

Bhavana Tv

Its Your Channel

ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ

ಭಟ್ಕಳ ; 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಕಳೆದ 3 ವರ್ಷಗಳ 100% ಫಲಿತಾಂಶದ ಜೊತೆ ನಾಲ್ಕನೇ ಬಾರಿಯೂ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 100ರಷ್ಟು ಫಲಿತಾಂಶ ದಾಖಲಾಗಿದೆ.

ಕುಮಾರಿ ಐಶ್ವರ್ಯ ಗಣಪತಿ ನಾಯ್ಕ ಮತ್ತು ಮಾನ್ಯ ಸತೀಶ್ ನಾಯ್ಕ 625 ಅಂಕಗಳಿಗೆ 604 ಅಂಕ (96.64%) ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕುಮಾರ ನಿನಾದ್ ರಾಜೇಶ್ ನಾಯ್ಕ 625 ಕ್ಕೆ 597 (95.52%) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಕುಮಾರಿ ಧನ್ಯಶ್ರೀ ಹೊನ್ನಪ್ಪ ನಾಯ್ಕ 625 ಕ್ಕೆ 594 (95.04%) ಅಂಕಗಳೊAದಿಗೆ ತೃತೀಯ ಸ್ಥಾನ ಪಡೆದಿದ್ದಾಳೆ.

9 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ ಹಾಗೂ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಕಾರ್ಯದರ್ಶಿಗಳು, ಮುಖ್ಯೊಪಾಧ್ಯಾಯರು ಮತ್ತು ಸಹ-ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

error: