May 4, 2024

Bhavana Tv

Its Your Channel

ಮರೆಯಾದ ಜಾನಪದ ಹಾಡು ಹಕ್ಕಿ ಹನುಮಿ ಗೌಡ

ಹೊನ್ನಾವರ : ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಅಳ್ಳಂಕಿ ಯರ್ಜಿನಮೂಲೆಯಲ್ಲಿ ಜನಿಸಿ ಸಾವಿರಕ್ಕೂ ಹೆಚ್ಚು ಜಾನಪದ ಹಾಡುಗಳನ್ನು ನಾಲಿಗೆಯ ತುದಿಯಲ್ಲಿಟ್ಟುಕೊಂಡು ಕೇಳುಗರನ್ನು ಮೂಕವಿಸ್ಮಿತರನ್ನಾಗಿಸುತ್ತಲೇ ಸಾಧನೆಯ ಪಥದಲ್ಲಿ ಹೆಜ್ಜೆಹಾಕಿದ ಜಾನಪದಶ್ರೀ ಹನುಮಿ ಕ್ಷೇತ್ರ ಗೌಡ ಇನ್ನು ನೆನಪು ಮಾತ್ರ.

ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಹನುಮಜ್ಜಿ ಸೋಮವಾರ ತಮ್ಮ ೭೪ ರ ಹರೆಯದಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾಳೆ. ಕೇವಲ ೪ ನೇ ತರಗತಿ ಓದಿಕೊಂಡು, ೧೩ ಹರೆಯದಲ್ಲಿ ಮದುವೆಯ ಬಂಧನಕಕ್ಕೊಳಗಾಗಿ, ೪೦ ಜನರಿದ್ದ ಅವಿಭಕ್ತ ಕುಟುಂಬದಲ್ಲಿ ಹಿರಿ ಕಿರಿಯರೊಂದಿಗೆ ಜೀವಿಸಬೇಕಾದ ಸವಾಲುಗಳೊಂದಿಗೆ ಜೀಕುತ್ತಲೇ ಜಾನಪದ ಹಾಡುಗಳ ಕಣಜವೆನ್ನಿಸಿಕೊಂಡಿದ್ದೊAದು ಅದ್ಭುತವೇ ಸರಿ.
೨೦೦೨ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜ್ಞಾನ ವಿಜ್ಞಾನ ಪ್ರಶಸ್ತಿ, ಕರ್ನಾಟಕ ಸರ್ಕಾರದ ಜಾನಪದಶ್ರೀ ಗೌರವಗಳನ್ನು ಮುಡಿಗೇರಿಸಿಕೊಂಡಿರುವ ೭೩ ವರ್ಷದ ಹಿರಿಯ ಜೀವ ಹನುಮಜ್ಜಿ. ಈಶಾನ್ಯ ರಾಜ್ಯ ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಡೆದ ರಾಷ್ಟಿçÃಯ ಜಾನಪದ ಉತ್ತೇಜನ ಕೇಂದ್ರದ ಕಾರ್ಯಕ್ರಮದಲ್ಲಿಯೂ ಭಾಗವಹಿಸಿ ಗಾಮೊಕ್ಕಲ ಜಾನಪದ ಲೋಕದ ವೈಭವವನ್ನು ಶಕ್ತಿಯುತವಾಗಿ ಹಾಡುಗಳ ಮೂಲಕ ತೆರೆದಿಟ್ಟ ಸಾಧನೆ ಮಾಡಿದ್ದಾಳೆ.
ಎಲೆಮರೆಯ ಕಾಯಿಯಂತಿದ್ದ ಹನುಮಜ್ಜಿಯ ಜಾನಪದ ಪ್ರತಿಭೆಯಮೇಲೆ ಬೆಳಕು ಚೆಲ್ಲಿ ಹೊರ ಜಗತ್ತಿಗೆ ಪರಿಚಯಿಸಿದ್ದು ಖ್ಯಾತ ಜಾನಪದ ವಿದ್ವಾಂಸರಾದ ಡಾ.ಎನ್.ಆರ್.ನಾಯಕ ಡಾ ಶಾಂತಿ ನಾಯಕ ದಂಪತಿಗಳ ಒಡನಾಟ ಮತ್ತು ಅವರ ಮಗಳಾದ ಸವಿತಾ ಉದಯ ಅವರ ಸಹಕಾರ ಎನ್ನುವುದು ಸ್ಮರಣೀಯ.

ಹನಮಿ ಕ್ಷೇತ್ರ ಗೌಡ ಅವರ ನಿಧನಕ್ಕೆ ಜಾನಪದ ವಿದ್ವಾಂಸರಾದ ಡಾ.ಎನ್.ಆರ್. ನಾಯಕ, ಸಾಹಿತಿ ಡಾ.ಶ್ರೀಪಾದ ಶೆಟ್ಟಿ ಡಾ.ಶಾಂತಿ ನಾಯಕ, ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷ ತಿಮ್ಮಪ್ಪ.ಜಿ. ಗೌಡ, ಸೇರಿದಂತೆ ಸಾವಿರಾರು ಮಂದಿ ಸಂತಾಪ ಸೂಚಿಸಿದ್ದಾರೆ.

error: