April 6, 2025

Bhavana Tv

Its Your Channel

ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಣೆ

ಕುಮಟಾ : ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಅಭಿಮಾನಿ ಬಳಗದಿಂದ ಕುಮಟಾ ತಾಲೂಕಿನ ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಿಸಲಾಯಿತು.

ಕುಮಟಾದ ತಾಲೂಕು ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ ಸೋನಿ ಅಭಿಮಾನಿ ಬಳಗದವರು ೧೨೩ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಿಸಿದರು. ಪೇಸ್ ಸೀಲ್ಡ್, ಛತ್ರಿ ಮಾಸ್ಕ್ ಮತ್ತು ಸಾರಿ ಹೊಂದಿರುವ ಆರೋಗ್ಯ ಕಿಟ್‌ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ ಸೋನಿ ಮಾತನಾಡಿ ಕೋರೋನಾ ಸಂಕಷ್ಟದ ಸ್ಥಿತಿಯಲ್ಲಿ ವಾರಿಯರ್ಸ್ ಗಳ ಹೋರಾಟ ಮೆಚ್ಚುವಂತದ್ದು ಸಂಭAಧಪಟ್ಟ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಜನಪ್ರತಿನಿಧಿಗಳು ಕೂಡಾ ಕೆಲಸ ಮಾಡಿದ್ದಾರೆ. ಇನ್ನು ಆಶಾ ಕಾರ್ಯಕರ್ತೆಯರು ಕಡಿಮೆ ಗೌರವಧನದಲ್ಲಿ ಜೀವನ ಸಾಗಿಸುವಂತವರಾಗಿದ್ದಾರೆ. ಹಾಗಾಗಿ ಅವರಿಗೆ ಆರೋಗ್ಯ ಕಿಟ್ ನೀಡಬೇಕೆಂಬ ಉದ್ದೇಶದಿಂದ ನನ್ನ ಅಭಿಮಾನಿ ಬಳಗದವರೆಲ್ಲ ಸೇರಿ ಕುಮಟಾ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಿಸುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಜೆಡಿಎಸ್ ತಾಲೂಕಾಧ್ಯಕ್ಷರಾದ ಸಿಜಿ ಹೆಗಡೆ ಮಾತನಾಡಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ವಂದಿಸುವ ಮನೋಭಾವ ಸೂರಜ ನಾಯ್ಕ ಸೋನಿಯವರಲ್ಲಿದೆ. ಅಧಿಕಾರ ಇರಲಿ ಇಲ್ಲದೇ ಇರಲಿ ಜನರ ಸಂಕಷ್ಟಕ್ಕೆ ಸದಾ ಜೊತೆಯಾಗಿ ಇರುತ್ತಾರೆ. ಕರೋನಾ ಸಂಕಷ್ಟದಲ್ಲಿರುವವರಿಗೆ ಮತ್ತು ವಾರಿಯರಸ್‌ಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕುಮಟಾ ತಾಲೂಕು ಆರೋಗ್ಯಧಾಧಿಕಾರಿ ಡಾ. ಆಜ್ಞಾ ನಾಯಕ ಮಾತನಾಡಿ ಕೊರೋನಾ ವಿಷಮ ಪರಿಸ್ಥಿತಿಯಲ್ಲಿ ಕಳೆದ ಎರಡು ವರ್ಷಗಳಿಂದ ಜನ ಸಾಮಾನ್ಯರ ಸುರಕ್ಷತೆಗಾಗಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಅವರ ಕಾರ್ಯವನ್ನು ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ ಸೋನಿಯವರು ಗುರುತಿಸುವ ಮೂಲಕ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಸಿಗಂಧೂರು ಚೌಡಮ್ಮ ಭಕ್ತ ಮಂಡಳಿ ಹಾಗೂ ರಾಮಪ್ಪನವರ ಅಭಿಮಾನಿ ಬಳಗದ ಅಧ್ಯಕ್ಷರಾದ ರವಿ ನನಾಯ್ಕ್ ಹೆಗಡೆ ಗ್ರಾ.ಪಂ ಅಧ್ಯಕ್ಷರಾದ ಚಂದ್ರಕಲಾ ಪಟಗಾರ, ಸೂರಜ್ ನಾಯ್ಕ ಸೋನಿ ಅಭಿಮಾನಿ ಬಳಗದ ಅಣ್ಣಪ್ಪ ನಾಯ್ಕ, ಸಂಪತ್ತಕುಮಾರ, ಶಿವರಾಮ ಮಡಿವಾಳ, ಪವನ ಗುನಗಾ ಇತರಿದ್ದರು.

error: